ಪುತ್ತೂರು, ಜನವರಿ 27, 2026 (ಕರಾವಳಿ ಟೈಮ್ಸ್) : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಬೇಧೀಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮೊಹಮ್ಮದ್ ಹರ್ಷದ್ ಪುತ್ತೂರು (33), ಮಹಮ್ಮದ್ ಆರೀಶ್ (31), ಪುತ್ತೂರು, ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ ಪುತ್ತೂರು (46), ಹಾಗೂ ಇವರಿಗೆ ಮಾದಕ ವಸ್ತು ಎಂಡಿಎಂಎ ಒದಗಿಸುತ್ತಿದ್ದ ಬಂಟ್ವಾಳ ನಿವಾಸಿ ಮುಸ್ತಾಫ (46) ಎಂದು ಹೆಸರಿಸಲಾಗಿದೆ.
ಆರೋಪಿಗಳಿಂದ ಸುಮಾರು 50 ಸಾವಿರ ರೂಪಾಯಿ ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎಂಎ, 0.87 ಗ್ರಾಂ ಗಾಂಜಾ, ಮೊಬೈಲ್ ಫೆÇೀನುಗಳು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ 2 ಕಾರುಗಳನ್ನು ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪೊಲೀಸರು ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 6.50 ಲಕ್ಷ ರೂಪಾಯಿಗಳು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಜನವರಿ 24 ರಂದು ಪ್ರಕರಣ ದಾಖಲಾಗಿದೆ.
ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣಾ ಪಿಎಸ್ಸೈ ಗುಣಾಪಾಲ ಜೆ ಅವರ ನೇತೃತ್ವದ ತನಿಖಾ ತಂಡದಲ್ಲಿ ಪುತ್ತೂರು ಗ್ರಾಮಾಂತರ ಪಿಎಸ್ಸೈ ಸುಶ್ಮಾ ಭಂಡಾರಿ ಹಾಗೂ ಸಿಬ್ಬಂದಿಗಳಾದ ಮುರುಗೇಶ್ ಪರಮೇಶ್ವರ, ಸತೀಶ್, ಸುಬ್ರಹ್ಮಣ್ಯ, ಹರೀಶ್, ನಾಗೇಶ್, ಭವಿತ್ ರೈ ವಿನೋದ್, ನಾಗರಾಜ್, ಕಾರ್ತಿಕ್ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ್, ಪ್ರಶಾಂತ ಎಂ, ಪ್ರವೀಣ್ ರೈ, ಪ್ರಶಾಂತ್ ರೈ, ಹರ್ಷಿತ್, ಸಂಪತ್ ಅವರು ಹಾಗೂ ಸೋಕೋ ತಂಡದವರು ಭಾಗವಹಿಸಿದ್ದರು ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.


















0 comments:
Post a Comment