ಮಂಗಳೂರು, ಜನವರಿ 08, 2026 (ಕರಾವಳಿ ಟೈಮ್ಸ್) : ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಪಡೀಲ್ ಕುಂದರ್ ಕುಟುಂಬಸ್ಥರ ದೈವಸ್ಥಾನ ಬಳಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ್ ಕಾಮತ್ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕರು ಇಲ್ಲಿ ತುರ್ತು ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲಾ ರೀತಿಯಲ್ಲೂ ವಿಶೇಷ ಸಹಕಾರ ನೀಡಲಾಗುವುದು ಎಂದರು.
ಈ ಸಂದರ್ಭ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ನಿಕಟಪೂರ್ವ ಪಾಲಿಕೆ ಸದಸ್ಯರಾದ ಶೋಭಾ ಪೂಜಾರಿ, ವಿಜಯ್ ಕುಮಾರ್ ಶೆಟ್ಟಿ, ಅಶ್ವಿತ್ ಕೊಟ್ಟಾರಿ, ಪ್ರವೀಣ್ ನಿಡ್ಡೇಲ್, ಭಾಸ್ಕರ್ ಚಂದ್ರ ಶೆಟ್ಟಿ, ಜಯಂತ್ ಪೂಜಾರಿ, ಜನಾರ್ಧನ್ ಕುಂದರ್ ಸರಿಪಳ್ಳ, ಸತೀಶ್ ಕುಂದರ್, ಸುನಿಲ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.




















0 comments:
Post a Comment