ಮಂಗಳೂರು, ಜನವರಿ 28, 2026 (ಕರಾವಳಿ ಟೈಮ್ಸ್) : ಮಂಗಳೂರು ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು, ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದೆ. ಇಂತಹ ವೈಭವದ ಹಬ್ಬಕ್ಕೆ ರಾಜ್ಯ ಸರ್ಕಾರ ಈ ಬಾರಿಯ 2026-27 ನೇ ಸಾಲಿನ ಬಜೆಟಿನಲ್ಲಿ 5 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡುವಂತೆ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಮೈಸೂರು ನಂತರ ರಾಜ್ಯದಲ್ಲೇ ಅತೀ ಹೆಚ್ಚು ಜನ ಸೇರುವ ಹಬ್ಬ ಮಂಗಳೂರು ದಸರಾ. ನವರಾತ್ರಿಯ ಸಂದರ್ಭದಲ್ಲಿ ಇಲ್ಲಿನ ಪ್ರಸಿದ್ಧ ತೀರ್ಥ ಕ್ಷೇತ್ರಗಳು ನಾಡಿನ ಭಕ್ತರಿಂದ ತುಂಬಿರುತ್ತವೆ. ರಾಜ್ಯ ಸರ್ಕಾರ ಬಜೆಟಿನಲ್ಲಿ 5 ಕೋಟಿ ರೂಪಾಯಿ ಘೋಷಣೆ ಮಾಡಿದರೆ ಇನ್ನಷ್ಟು ವಿಜೃಂಭಣೆಯಿಂದ ದಸರಾ ಆಯೋಜನೆ ಮಾಡಬಹುದಾಗಿದ್ದು ಹಬ್ಬದ ಸಂಭ್ರಮವೂ ಹೆಚ್ಚಲಿದೆ. ದಯವಿಟ್ಟು ಈ ಬಗ್ಗೆ ಆದ್ಯತೆಯ ಮೇರೆಗೆ ಕ್ರಮಗೊಳ್ಳಿ ಎಂದು ಶಾಸಕರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.














0 comments:
Post a Comment