ಬಂಟ್ವಾಳ, ಜನವರಿ 26, 2026 (ಕರಾವಳಿ ಟೈಮ್ಸ್) : ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿ ಜನವರಿ 24 ರಂದು ರಾತ್ರಿ ಸಂಭವಿಸಿದೆ.
ಗಾಯಗೊಂಡವರನ್ನು ಸುಧಾಕರ ಎಂದು ಹೆಸರಿಸಲಾಗಿದೆ. ಇವರು ಬಂಟ್ವಾಳ-ಕಡೂರು ಹೆದ್ದಾರಿ ದಾಟಿ ಬರುತ್ತಿದ್ದ ವೇಳೆ ಬಿ ಸಿ ರೋಡು ಕಡೆಯಿಂದ ಅಲೋಶಿಯಸ್ ಮಸ್ಕರೇನಸ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ರಸ್ತೆಗೆ ಎಸೆಯಲ್ಪಟ್ಟ ಸುಧಾಕರ ಅವರ ತಲೆ ಹಾಗೂ ಕಾಲಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಪಡೀಲ್ ಜನಪ್ರಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಅವರ ಸಂಬಂಧಿ ವಸಂತ ಕುಮಾರ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.























0 comments:
Post a Comment