ಬಂಟ್ವಾಳ, ಜನವರಿ 01, 2026 (ಕರಾವಳಿ ಟೈಮ್ಸ್) : ಪ್ರಾಮಾಣಿಕತೆ, ಮಾನವೀಯ ಮೌಲ್ಯಗಳು ವಿದ್ಯಾರ್ಥಿಗಳ ಸೊತ್ತಾಗಬೇಕು. ಆಧುನಿಕ ತಂತ್ರಜ್ಞಾನಗಳ ಪರಿಣಾಮಕಾರಿ ಪ್ರಭಾವದಿಂದ ಸನ್ನಡತೆಗೆ ವಿಮುಖರಾಗದೆ ಬದುಕಿನ ಮೌಲ್ಯಗಳಿಗೆ ಬೆಲೆ ನೀಡಬೇಕಾಗಿದೆ. ಅಂಕಗಳ ಜೊತೆಗೆ ಕೌಶಲಗಳ ಬೆಳವಣಿಗೆಗೆ ಹೆಚ್ಚು ಒತ್ತು ನೀಡುವ ಮೂಲಕ ಬದುಕಿನ ಭದ್ರತೆಗೆ ಬುನಾದಿ ಹಾಕಬೇಕಾಗಿದೆ ಎಂದು ನಿವೃತ್ತ ಶಿಕ್ಷಣ ಅಧಿಕಾರಿ ಡಾ ಕುಮಾರಸ್ವಾಮಿ ಎಚ್ ಹೇಳಿದರು.
ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯ 48ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಅಸ್ಮಾ ಹಸೈನಾರ್ ತಾಳಿತ್ತನೂಜಿ, ಸದಸ್ಯ ಮುಹಮ್ಮದ್ ಮಂಚಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮ್ ಪ್ರಸಾದ್ ರೈ ತಿರುವಾಜೆ, ಪ್ರಗತಿಪರ ಕೃಷಿಕ ನಿಶ್ಚಲ್ ಜಿ ಶೆಟ್ಟಿ, ಯಕ್ಷಗಾನ ತರಬೇತುದಾರ ಅಶ್ವಥ್ ಮಂಜನಾಡಿ ಭಾಗವಹಿಸಿದ್ದರು.
ಇದೇ ವೇಳೆ ಶಾಲಾ ಹಿರಿಯ ವಿದ್ಯಾರ್ಥಿನಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ ಪಿ ಮಮತಾ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂ ಸಾಂಸ್ಕೃತಿಕ ಕಾರ್ಯಕ್ರಮಗಳು, ಯಕ್ಷಗಾನ, ನಾಟಕ ಪ್ರದರ್ಶನಗಳು ನಡೆದವು.
ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸವಿತಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಶಂಕರ್ ರಾವ್, ಸದಸ್ಯರಾದ ಶ್ರೀಮತಿ ಚಂದ್ರಾವತಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಶ್ರೀಮತಿ ಸುಶೀಲ ವಿಟ್ಲ ವರದಿ ವಾಚಿಸಿ, ಪ್ರಸ್ತಾವನೆಗೈದರು. ಶಿಕ್ಷಕರಾದ ಜಗನ್ನಾಥ ಪಿ ಸ್ವಾಗತಿಸಿ, ಶ್ರೀಮತಿ ಸುನಂದ ಎಚ್ ಬಿ ವಂದಿಸಿದರು. ವಾಝಿ ಮೊಂತೆರೊ ಕಾರ್ಯಕ್ರಮ ನಿರೂಪಿಸಿದರು.


















0 comments:
Post a Comment