ಮಂಗಳೂರು, ಜನವರಿ 22, 2026 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ.ಕ ಜಿಲ್ಲೆಯಲ್ಲಿರುವ ಡಾ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಿಗೆ ಶೈಕ್ಷಣಿಕ ವರ್ಷ 2026-27ನೇ ಸಾಲಿನಲ್ಲಿ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ “ಸೇವಾ ಸಿಂಧು ಪೆÇೀರ್ಟಲ್” ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಫೆಬ್ರವರಿ 10 ರವರೆಗೆ ಸಲ್ಲಿಸಬಹುದು. ಎಲ್ಲಾ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಸೇವಾ ಸಿಂಧು ಪೆÇೀರ್ಟಲ್ ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು ಅಥವಾ ಹತ್ತಿರದ ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದು.
ವಸತಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳು :
ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ, ಉಚಿತವಾಗಿ ಸಮವಸ್ತ್ರ, ಬೂಟು, ಸಾಕ್ಸ್ ಪೂರೈಕೆ, ಪಠ್ಯ ಪುಸ್ತಕ ಮತ್ತು ಲೇಖನ ಸಾಮಾಗ್ರಿ ನೀಡಲಾಗುತ್ತದೆ. ಶಾಲೆಗಳಲ್ಲಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಾಗ್ರಿ, ಗ್ರಂಥಾಲಯಗಳ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಅಲ್ಪಸಂಖ್ಯಾತರ ವಸತಿ ಶಾಲೆಗಳ ವಿವರ :
ಉಳ್ಳಾಲ ತಾಲೂಕಿನ ಅಸೈಗೋಳಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ : ಆಂಗ್ಲ ಮಾಧ್ಯಮ, (ಸಿ.ಬಿ.ಎಸ್.ಇ ಸಿಲೆಬಸ್)
ಉಳ್ಳಾಲ ತಾಲೂಕಿನ ಅಸೈ ಮದಕ ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಆಂಗ್ಲ ಮಾಧ್ಯಮ (ಸ್ಟೇಟ್ ಸಿಲೆಬಸ್)
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಂಗಳೂರು (08242433078), ಬಂಟ್ವಾಳ (08255232470), ಬೆಳ್ತಂಗಡಿ (0826295335), ಪುತ್ತೂರು (08251237078), ಸುಳ್ಯ (08257230666) ಹಾಗೂ ಇಲಾಖೆಯ ವೆಬ್ ಸೈಟ್ ಅಥವಾ ಸಹಾಯವಾಣಿ 8277799990 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












0 comments:
Post a Comment