ಬಂಟ್ವಾಳ, ಜನವರಿ 25, 2026 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೆÇಲೀಸರು ಮೂವರನ್ನು ಬಂಧಿಸಿದ ಘಟನೆ ಸಜಿಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಜನವರಿ 23 ರಂದು ಸಂಜೆ ನಡೆದಿದೆ.
ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕು ಸಜಿಪಮುನ್ನೂರು ಗ್ರಾಮದ ನಿವಾಸಿ ಮಹಮ್ಮದ್ ತೌಸೀಫ್ (26), ಮೂಲತಃ ಪುದು ಗ್ರಾಮದ ನಿವಾಸಿ, ಪ್ರಸ್ತುತ ಪಾಣೆಮಂಗಳೂರು ಗ್ರಾಮದಲ್ಲಿ ವಾಸ್ತವ್ಯ ಹೊಂದಿರುವ ಜಾಫರ್ ಶರೀಫ್ ಹಾಗೂ ಉಳ್ಳಾಲ ತಾಲೂಕು ಮಂಜನಾಡಿ ನಾಟೆಕಲ್ ಗ್ರಾಮದ ನಿವಾಸಿ ಮಹಮ್ಮದ್ ಬಶೀರ್ ಎಂದು ಹೆಸರಿಸಲಾಗಿದೆ.
ಸಜಿಪನಡು ಗ್ರಾಮದ ಕಂಚಿನಡ್ಕ ಪದವು ಸಾರ್ವಜನಿಕ ಸ್ಥಳದಲ್ಲಿ ಮೂವರು ವ್ಯಕ್ತಿಗಳು ಮಾದಕ ವಸ್ತು ಸೇವಿಸಿ ನಶೆಯಲ್ಲಿ ವರ್ತಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಬಂದ ಮೇರೆಗೆ ಬಂಟ್ವಾಳ ಗ್ರಾಮಾಂತರ ಪಿಎಸ್ಸೈ ಮಂಜುನಾಥ ಟಿ ನೇತೃತ್ವದ ಪೆÇಲೀಸರು ಈ ದಾಳಿ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಮಾದಕ ವಸ್ತು ಗಾಂಜಾ ಸೇವಿಸಿರುವ ಅನುಮಾನ ಬಂದ ಹಿನ್ನೆಲೆಯಲ್ಲಿ, ಅವರನ್ನು ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಮೂವರು ಗಾಂಜಾ ಸೇವಿಸಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























0 comments:
Post a Comment