ಮಂಗಳೂರು, ಜನವರಿ 21, 2026 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ವಸತಿಯುತ ಪ್ಲಂಬಿಂಗ್ ವೃತ್ತಿ ಆಧಾರಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಛೇರಿ, ಓಲ್ಟ್ ಕೆಂಟ್ ರೋಡ್ ಪಾಂಡೇಶ್ವರ ಇಲ್ಲಿಗೆ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಬೆಂಗಳೂರು ಆಶೀರ್ವಾದ್ ಪೈಪ್ಸ್ ಪ್ರೈವೇಟ್ ಲಿಮಿಟೆಡ್ ಇವರ ಮೂಲಕ ತರಬೇತಿ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಂಗಳೂರು (08242433078), ಬಂಟ್ವಾಳ (08255232470), ಬೆಳ್ತಂಗಡಿ (0826295335), ಪುತ್ತೂರು (08251237078), ಸುಳ್ಯ (08257230666) ಹಾಗೂ ಇಲಾಖೆಯ ವೆಬ್‍ಸೈಟ್ ಅಥವಾ ಸಹಾಯವಾಣಿ 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












0 comments:
Post a Comment