ಬಂಟ್ವಾಳ, ಜನವರಿ 26, 2026 (ಕರಾವಳಿ ಟೈಮ್ಸ್) : ಮನರೇಗಾ ಕಾಯ್ದೆ ಪುನರ್ ಸ್ಥಾಪನೆಗೆ ಆಗ್ರಹಿಸಿ ಜನವರಿ 27 ರಂದು ಮಂಗಳವಾರ ಬೆಳಿಗ್ಗೆ 9.30ಕ್ಕೆ ಸಜಿಪಮುನ್ನೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗುವುದು. ಈ ಪ್ರಯುಕ್ತ ಮಾರ್ನಬೈಲ್ ಜಂಕ್ಷನ್ನಿನಿಂದ ಸಜಿಪಮುನ್ನೂರು ಗ್ರಾಮ ಪಂಚಾಯತ್ ಕಚೇರಿಗೆ ಪಾದಯಾತ್ರೆ ನಡೆಸಿ ಬಳಿಕ ಮನವಿ ಸಲ್ಲಿಸಲಾಗುವುದು.
ಕಾರ್ಯಕ್ರಮದಲ್ಲಿ ಮಾಜಿ ಸಚಿವರೂ, ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ಬಿ ರಮಾನಾಥ ರೈ, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಸಹಿತ ಪ್ರಮುಖ ನಾಯಕರುಗಳು ಪಾಲ್ಗೊಳ್ಳುವರು.
ಈ ಪಾದಯಾತ್ರೆ ಮನವಿ ನೀಡುವ ಕಾರ್ಯಕ್ರಮಕ್ಕೆ ಸಜಿಪಮುನ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳು, ಹಾಲಿ ಸದಸ್ಯರುಗಳು, ಮಾಜಿ ಸದಸ್ಯರುಗಳು, ತಾಲೂಕು ಪಂಚಾಯತ್ ಮಾಜಿ ಸದಸ್ಯರುಗಳು, ಪಕ್ಷದ ಬೂತ್ ಅಧ್ಯಕ್ಷರುಗಳು, ಬೂತ್ ಏಜೆಂಟರು ಹಾಗೂ ಮುಂಚೂಣಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಹಕರಿಸುವ ಮೂಲಕ ಯಶಸ್ವಿಗೊಳಿಸುವಂತೆ ಹಾಗೂ ಇದಕ್ಕೆ ಪೂರಕವಾಗಿ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಜನವರಿ 28 ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ಮಣಿಹಳ್ಳದಿಂದ ಬಿ ಸಿ ರೋಡು-ಕೈಕಂಬ ದ್ವಾರದವರೆಗೆ ನಡೆಯುವ ಪಾದಯಾತ್ರೆ ಹಾಗೂ ಬಳಿಕ ಬಿ ಸಿ ರೋಡು ಮಿನಿ ವಿಧಾನಸೌಧ ಮುಂಭಾಗ ನಡೆಯುವ ಪ್ರತಿಭಟನಾ ಸಭೆಯಲ್ಲೂ ಸರ್ವರೂ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಜಿಪಮುನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಯೂಸುಫ್ ಕರಂದಾಡಿ ಮನವಿ ಮಾಡಿದ್ದಾರೆ.
























0 comments:
Post a Comment