ಗಣರಾಜ್ಯೋತ್ಸವ ಆಚರಣೆ : ಅಗತ್ಯ ಸಿದ್ದತೆ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ - Karavali Times ಗಣರಾಜ್ಯೋತ್ಸವ ಆಚರಣೆ : ಅಗತ್ಯ ಸಿದ್ದತೆ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ - Karavali Times

728x90

17 January 2026

ಗಣರಾಜ್ಯೋತ್ಸವ ಆಚರಣೆ : ಅಗತ್ಯ ಸಿದ್ದತೆ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಜನವರಿ 17, 2026 (ಕರಾವಳಿ ಟೈಮ್ಸ್) : ಪ್ರತಿ ವರ್ಷದಂತೆ ಈ ಬಾರಿಯೂ  ನಗರದ ನೆಹರೂ ಮೈದಾನದಲ್ಲಿ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ವಿಜೃಂಭಣೆಯಿಂದ ನಡೆಯಲು ಅಗತ್ಯ ಸಿದ್ಧತೆ ನಡೆಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಧ್ವಜಾರೋಹಣ ಸ್ಥಳ ನಿಗದಿ ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದು, ಸಮಾವೇಶ, ಪರೇಡ್ ವೀಕ್ಷಣೆ, ಸಚಿವರಿಂದ ಗಣರಾಜ್ಯೋತ್ಸವ ಸಂದೇಶ, ಪಥ ಸಂಚಲನ, ಪ್ರಶಸ್ತಿ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ವ್ಯವಸ್ಥಿತವಾಗಿ ಗಣರಾಜ್ಯೋತ್ಸವ ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದವರು ಸೂಚಿಸಿದರು.

ಎಲ್ಲಾ ಇಲಾಖಾ ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯಾಯ ಇಲಾಖಾಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದ ಅವರು, ಕುಡಿಯುವ ನೀರಿನ ವ್ಯವಸ್ಥೆ, ತುರ್ತು ಚಿಕಿತ್ಸೆ ಆಂಬುಲೆನ್ಸ್ ನಿಯೋಜನೆ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಸಂಬಂಧಿಸಿದ ಇಲಾಖಾಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು. 

ಸಭೆಯಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಹೆಚ್ಚುವರಿ ಪೆÇಲೀಸ್ ಆಧೀಕ್ಷಕ ಅನಿಲ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಗಣರಾಜ್ಯೋತ್ಸವ ಆಚರಣೆ : ಅಗತ್ಯ ಸಿದ್ದತೆ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ Rating: 5 Reviewed By: karavali Times
Scroll to Top