ದೇಶದ ಶಾಂತಿ-ಸೌಹಾರ್ದತೆ, ಭ್ರಾತೃತ್ವ ಕಾಪಾಡಿದರೆ ಗಣರಾಜ್ಯವನ್ನು ಕಾಪಾಡಿಕೊಂಡಂತೆ : ದಂಡಾಧಿಕಾರಿ ಮಂಜುನಾಥ್ - Karavali Times ದೇಶದ ಶಾಂತಿ-ಸೌಹಾರ್ದತೆ, ಭ್ರಾತೃತ್ವ ಕಾಪಾಡಿದರೆ ಗಣರಾಜ್ಯವನ್ನು ಕಾಪಾಡಿಕೊಂಡಂತೆ : ದಂಡಾಧಿಕಾರಿ ಮಂಜುನಾಥ್ - Karavali Times

728x90

25 January 2026

ದೇಶದ ಶಾಂತಿ-ಸೌಹಾರ್ದತೆ, ಭ್ರಾತೃತ್ವ ಕಾಪಾಡಿದರೆ ಗಣರಾಜ್ಯವನ್ನು ಕಾಪಾಡಿಕೊಂಡಂತೆ : ದಂಡಾಧಿಕಾರಿ ಮಂಜುನಾಥ್

ಬಿ.ಸಿ.ರೋಡಿನಲ್ಲಿ ಬಂಟ್ವಾಳ ತಾಲೂಕು ಮಟ್ಟದ ಗಣರಾಜ್ಯೋತ್ಸವ ಆಚರಣೆ 


ಬಂಟ್ವಾಳ, ಜನವರಿ 26, 2026 (ಕರಾವಳಿ ಟೈಮ್ಸ್) : ಸರಕಾರ ಹಾಗೂ ಜನರ ನಡುವಿನ ಕೊಂಡಿಯಾಗಿ ಕೆಲಸ ಮಾಡೋದು ಸರಕಾರಿ ಉದ್ಯೋಗಿಗಳ ಕರ್ತವ್ಯವಾಗಿದೆ. ಸರಕಾರಿ ನೌಕರರು ತಮ್ಮ ಜವಾಬ್ದಾರಿಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದಾಗ ಜನರ ಹಿತದ ಜೊತೆಗೆ ದೇಶದ ಅಭಿವೃದ್ದಿಯೂ ಆಗಲಿದೆ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. 

ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಬಿ ಸಿ ರೋಡಿನ ಆಡಳಿತ ಸೌಧದಲ್ಲಿ ನಡೆದ ದೇಶದ 77ನೇ ಗಣರಾಜ್ಯೋತ್ಸವ ಆಚರಣೆಯ ಧ್ವಾಜರೋಹಣ ನೆರವೇರಿಸಿ ಮಾತನಾಡಿದ ಅವರು, ದೇಶದ ಶಾಂತಿ-ಸೌಹಾರ್ದತೆ ಹಾಗೂ ಭ್ರಾತೃತ್ವವನ್ನು ಕಾಪಾಡಿಕೊಂಡು ಬಂದಾಗ ನಿಜವಾದ ಗಣರಾಜ್ಯವನ್ನು ಕಾಪಾಡಿಕೊಂಡಂತಾಗುತ್ತದೆ ಎಂದರು. 

ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅವರು ಜನತೆಗೆ 77ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದರು. 

ಗಣರಾಜ್ಯೋತ್ಸವ ಪ್ರಯುಕ್ತ ವಿಶೇಷ ಉಪನ್ಯಾಸ ನೀಡಿದ ಕಾವಳಕಟ್ಟೆ ಶಾಲಾ ವಿದ್ಯಾರ್ಥಿನಿ ಕು ವಂದನಾ ಮಾತನಾಡಿ, ಸಂವಿಧಾನದ ಆಶಯಗಳ ಸಾಕಾರ ಪ್ರತಿಯೊಬ್ಬರ ಧ್ಯೇಯ ಆಗಬೇಕು. ಭ್ರಷ್ಟಾಚಾರ, ಭಯೋತ್ಪಾದನೆ ಮೂಲೋತ್ಪಾದನೆಗೆ ಕಟಿ ಬದ್ದರಾಗಬೇಕು ಎಂದು ಕರೆ ನೀಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಜಿ ಯೋಧ ಕ್ಯಾ ಧನಂಜಯ ಅವರು ಗಣರಾಜ್ಯಕ್ಕೆ ದೊಡ್ಡ ಸವಾಲಾಗಿರುವುದು ಸಮಾಜದಲ್ಲಿ ಆಳವಾಗಿ ಬೇರೂರಿರುವ ಡ್ರಗ್ಸ್ ಮಾಫಿಯಾ. ಈ ಬಗ್ಗೆ ವಿದ್ಯಾರ್ಥಿ ಸಮೂಹ ಜಾಗರೂಕರಾಗುವ ಜೊತೆಗೆ ಶಿಕ್ಷಕರು, ಪೋಷಕರು ಹಾಗೂ ಸಮಾಜ ಗಂಭೀರವಾಗಿ ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಒತ್ತಿ ಹೇಳಿದರು. 

ಬುಡಾ ಅಧ್ಯಕ್ಷ ಬೇಬಿ ಕುಂದರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಮುಖ್ಯ ಅತಿಥಿಗಳಾಗಿದ್ದರು. ಇದೇ ವೇಳೆ ಮಾಜಿ ಸೈನಿಕರಾದ ಕ್ಯಾ ಧನಂಜಯ, ಹೆನ್ರಿ ರೋಡ್ರಿಗಸ್, ರಂಗನಾಥ ರೈ, ಮಾಧವ ಕುಲಾಲ್ ಮಾಣಿ, ಮೋಹನ್ ಗೌಡ ಅವರನ್ನು ಸನ್ಮಾನಿಸಲಾಯಿತು. 

ಕಬಡ್ಡಿ, ಕರಾಟೆ, ವೈಟ್ ಲಿಫ್ಟ್, ಡಿಸ್ಕ್ ತ್ರೋ, ಈಜು ಮೊದಲಾದ ವಿಭಾಗಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಾದ ಪ್ರೀತೇಶ್ ವಿಟ್ಲ, ಚೈತನ್ಯಾ ಸಾಲೆತ್ತೂರು, ಕೀರ್ತಿ ಕುಕ್ಕಿಲ, ಹೇಮಂತ್ ತೆಂಕ ಕಜೆಕಾರು, ಶಮೀರ್ ಅಬ್ದುಲ್ಲ, ಸಾನ್ವಿ ಕೆ, ಕೃತಿ ನೆಟ್ಲ, ಅನಘ್ರ್ಯ ಬರಿಮಾರು, ಅನನ್ಯ ಬರಿಮಾರು ಹಾಗೂ ಜಾವೆಲಿನ್ ಮತ್ತು ಡಿಸ್ಕ್ ತ್ರೋ ವಿಭಾಗದಲ್ಲಿ ಸಾಧನೆಗೈದ ಶಿಕ್ಷಕಿ ಶ್ರೀಮತಿ ಭಾಗೀರಥಿ ರೈ ಅವರನ್ನು ಗೌರವಿಸಲಾಯಿತು. ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಟಾಪರ್ ಗಳಾದ ವಿದ್ಯಾರ್ಥಿಗಳಿಗೆ ನಗದು ಪ್ರೋತ್ಸಾಹಧನ ವಿತರಿಸಲಾಯಿತು. 

ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ವಂದಿಸಿದರು. ಶಿಕ್ಷಕ ಗೋಪಾಕೃಷ್ಣ ಮಾಣಿ ಕಾರ್ಯಕ್ರಮ ನಿರೂಪಿಸಿದರು. ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರೈತ ಗೀತೆ ಹಾಗೂ ನಾಡಗೀತೆ ಹಾಡಿದರು. 

ಇದಕ್ಕೂ ಮೊದಲು ಪೊಲೀಸ್, ಗೃಹರಕ್ಷಕ ದಳ, ಮಾಜಿ ಸೈನಿಕರು, ವಿವಿಧ ಶಾಲೆಗಳ ಸ್ಕೌಟ್ಸ್, ಗೈಡ್ಸ್ ಮೊದಲಾದ ತಂಡಗಳಿಂದ ಪಥ ಸಂಚಲನ ಹಾಗೂ ಅತಿಥಿಗಳಿಂದ ಗೌರವ ವಂದನೆ ಸ್ವೀಕಾರ ನಡೆಯಿತು. ಬಳಿಕ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಮನೋರಂಜನೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು. 

  • Blogger Comments
  • Facebook Comments

0 comments:

Post a Comment

Item Reviewed: ದೇಶದ ಶಾಂತಿ-ಸೌಹಾರ್ದತೆ, ಭ್ರಾತೃತ್ವ ಕಾಪಾಡಿದರೆ ಗಣರಾಜ್ಯವನ್ನು ಕಾಪಾಡಿಕೊಂಡಂತೆ : ದಂಡಾಧಿಕಾರಿ ಮಂಜುನಾಥ್ Rating: 5 Reviewed By: karavali Times
Scroll to Top