ಸಂಚಾರ ನಿಯಮ ಪಾಲಿಸುವುದು ಜೀವ ರಕ್ಷಣೆಗಿರುವ ಸಾಧನ : ನ್ಯಾಯಾಧೀಶೆ ಜೈಬುನ್ನೀಸಾ - Karavali Times ಸಂಚಾರ ನಿಯಮ ಪಾಲಿಸುವುದು ಜೀವ ರಕ್ಷಣೆಗಿರುವ ಸಾಧನ : ನ್ಯಾಯಾಧೀಶೆ ಜೈಬುನ್ನೀಸಾ - Karavali Times

728x90

5 January 2026

ಸಂಚಾರ ನಿಯಮ ಪಾಲಿಸುವುದು ಜೀವ ರಕ್ಷಣೆಗಿರುವ ಸಾಧನ : ನ್ಯಾಯಾಧೀಶೆ ಜೈಬುನ್ನೀಸಾ

ಮಂಗಳೂರು, ಜನವರಿ 05, 2026 (ಕರಾವಳಿ ಟೈಮ್ಸ್) : ಸಂಚಾರ ನಿಯಮಗಳನ್ನು ಉಲ್ಲಂಘಿಸದೆ ಕಟ್ಟುನಿಟ್ಟಾಗಿ ಪಾಲಿಸಿದರೆ ರಸ್ತೆ ಅಪಘಾತಗಳನ್ನು ತಡೆಗಟ್ಟಬಹುದು. ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ರಸ್ತೆ ಅಪಘಾತಗಳನ್ನು ತಡೆಯಲು  ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ ಹೇಳಿದರು.

   ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ, ಪೆÇಲೀಸ್ ಇಲಾಖೆ ಸಹಯೋಗದಲ್ಲಿ ಮಂಗಳೂರು ಪ್ರಾದೇಶಿಕ ಸಾರಿಗೆ ಕಛೇರಿ ಸಭಾಂಗಣದಲ್ಲಿ ಡಿ 5 ರಂದು ನಡೆದ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಅಪಘಾತದಿಂದ ಅನೇಕ ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ರಸ್ತೆ ನಿಯಮಗಳನ್ನು ಪಾಲಿಸುವುದೊಂದೇ ಜೀವ ರಕ್ಷಣೆಗಿರುವ ಸಾಧನ. ನಮ್ಮನ್ನೇ ನಂಬಿಕೊಂಡಿರುವ ಕುಟುಂಬದ ಕ್ಷೇಮವನ್ನು ವಾಹನ ಸವಾರರು ಸದಾ ನೆನಪಿನಲ್ಲಿಡಬೇಕು ಎಂದರು. 

ರಸ್ತೆ ಸುರಕ್ಷತೆಯ ಬಗ್ಗೆ ಜನರಿಗೆ ಸಮಗ್ರ ಮಾಹಿತಿ ನೀಡಬೇಕು. ಯುವಕರಲ್ಲಿ ಕಾನೂನಿನ ಅರಿವಿನ ಕೊರತೆಯಿದ್ದು, ಶಾಲಾ-ಕಾಲೇಜು ಮಕ್ಕಳಿಗೆ ಸಂಚಾರ ನಿಯಮದ ಬಗ್ಗೆ ಅರಿವು ಮೂಡಿಸಬೇಕು. ವಾಹನ ಸವಾರರು ಅತಿಯಾದ ವೇಗದಲ್ಲಿ ಮತ್ತು ಮದ್ಯ ಸೇವಿಸಿ, ಅಜಾಗರೂಕತೆಯಿಂದ ವಾಹನ ಚಲಾಯಿಸುವುದು ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದರು.    

ಉಪಸಾರಿಗೆ ಆಯುಕ್ತ ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರಗೇಂದ್ರ ಬಸವರಾಜ ಶಿರೋಳಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಂಚಾರ ಪೆÇೀಲಿಸ್ ಉಪವಿಭಾಗದ ಸಹಾಯಕ ಆಯುಕ್ತೆ  ನಜ್ಮಾ ಫಾರೂಖಿ ಮೊದಲಾದವರು ಭಾಗವಹಿಸಿದ್ದರು. ಕಛೇರಿ ಅಧೀಕ್ಷಕಿ ರಶ್ಮಿ ಸ್ವಾಗತಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಸಂಚಾರ ನಿಯಮ ಪಾಲಿಸುವುದು ಜೀವ ರಕ್ಷಣೆಗಿರುವ ಸಾಧನ : ನ್ಯಾಯಾಧೀಶೆ ಜೈಬುನ್ನೀಸಾ Rating: 5 Reviewed By: karavali Times
Scroll to Top