ಮಂಗಳೂರು, ಜನವರಿ 23, 2026 (ಕರಾವಳಿ ಟೈಮ್ಸ್) : ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಕೇಂದ್ರ ಸಮಿತಿ ಮಂಗಳೂರು ಇದರ ವತಿಯಿಂದ ಐಡಿಎಸ್ ಕಾಲೇಜು ಶೇಫರ್ಡ್ ಶಾಹಿನ್ ಪಿಯು ಕಾಲೇಜು ಸಹಯೋಗದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖಾ ಮೌಲಾನಾ ಅಝಾದ್ ಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಾಸಿಂಗ್ ಪ್ಯಾಕೇಜ್ ತರಬೇತಿ ಐಡಿಸ್ ವಿದ್ಯಾ ಸಂಸ್ಥೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯವಾಗಿ ಗಣಿತ ಮತ್ತು ವಿಜ್ಞಾನ ತರಗತಿ ಬಗ್ಗೆ ಫಲಿತಾಂಶ ಉತ್ತಮಪಡಿಸುವ ಬಗ್ಗೆ ತರಬೇತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಕಲಿಕಾ ಆಸಕ್ತಿ ಮತ್ತು ಕಲಿಕೆಯ ಮಹತ್ವ ವಿವರಿಸಲಾಯತು. ವಿದ್ಯಾರ್ಥಿಗಳಿಗೆ ಸುಲಭವಾಗಿ ತೇರ್ಗಡೆ ಹೊಂದಲು ಬೇಕಾಗುವ ವಿಧಾನ ಅಧ್ಯಯನ ಬಗ್ಗೆ ಮಾರ್ಗದರ್ಶನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮೀಫ್ ಅಧ್ಯಕ್ಷ ಮೂಸಬ್ಬ ಬ್ಯಾರಿ ಅವರು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಮೊದಲಾದವರು ಭಾಗವಹಿಸಿದ್ದರು.













0 comments:
Post a Comment