ಬಂಟ್ವಾಳ, ಜನವರಿ 17, 2026 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಗೊಳಪಟ್ಟ ಸಜಿಪಮೂಡ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ನೇಮಕಗೊಂಡಿದ್ದಾರೆ.
ಮಾಜಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸು ಮೇರೆಗೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಚಂದ್ರಶೇಖರ ಭಂಡಾರಿ ಅವರು ಈ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಬಿ ಸಿ ರೋಡಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷ ಚಂದ್ರಶೇಖರ್ ಭಂಡಾರಿ ಅವರು ಆದೇಶ ಪತ್ರವನ್ನು ಶೈಲೇಶ್ ಪೂಜಾರಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ (ಬುಡಾ) ಅಧ್ಯಕ್ಷ ಬೇಬಿ ಕುಂದರ್, ಸಜಿಪಮೂಡ ವಲಯ ಕಾಂಗ್ರೆಸ್ ನಿರ್ಗಮನ ಅಧ್ಯಕ್ಷ ಎನ್ ಕರೀಂ ಬೊಳ್ಳಾಯಿ ಮೊದಲಾದವರು ಉಪಸ್ಥಿತರಿದ್ದರು.















0 comments:
Post a Comment