ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಿಗೆ ಮನೆ ಬಾಗಿಲ್ಲೇ ಆರೋಗ್ಯ ಸೇವೆ ನೀಡುವ ವಾಹನಕ್ಕೆ ಮಂಗಳೂರಿನಲ್ಲಿ ಉಸ್ತುವಾರಿ ಸಚಿವರಿಂದ ಚಾಲನೆ - Karavali Times ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಿಗೆ ಮನೆ ಬಾಗಿಲ್ಲೇ ಆರೋಗ್ಯ ಸೇವೆ ನೀಡುವ ವಾಹನಕ್ಕೆ ಮಂಗಳೂರಿನಲ್ಲಿ ಉಸ್ತುವಾರಿ ಸಚಿವರಿಂದ ಚಾಲನೆ - Karavali Times

728x90

9 January 2026

ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಿಗೆ ಮನೆ ಬಾಗಿಲ್ಲೇ ಆರೋಗ್ಯ ಸೇವೆ ನೀಡುವ ವಾಹನಕ್ಕೆ ಮಂಗಳೂರಿನಲ್ಲಿ ಉಸ್ತುವಾರಿ ಸಚಿವರಿಂದ ಚಾಲನೆ

ಮಂಗಳೂರು, ಜನವರಿ 09, 2026 (ಕರಾವಳಿ ಟೈಮ್ಸ್) : ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮನೆಬಾಗಿಲಲ್ಲೇ ಅರೋಗ್ಯ ಸೇವೆಗಳನ್ನು ನೀಡುವ  ಉದ್ದೇಶದಿಂದ ಸ್ಥಾಪಿಸಲಾಗಿರುವ ಸಂಚಾರಿ ಅರೋಗ್ಯ ಘಟಕಗಳಿಗೆ ಅರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜ 9 ರಂದು ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯ 5 ಹಾಗೂ ಉಡುಪಿ ಜಿಲ್ಲೆಯ 4 ಸಂಚಾರಿ ಅರೋಗ್ಯ ಘಟಕ ವಾಹನಗಳಿಗೆ ಚಾಲನೆ ನೀಡಿದರು. 

ಈ ಸಂದರ್ಭ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಒಟ್ಟು 81 ಸಂಚಾರಿ ಅರೋಗ್ಯ ಘಟಕಗಳಿಗೆ ಚಾಲನೆ ನೀಡಲಾಗಿದೆ. ಇದು ಸರಕಾರದ ಜನಪರ ಯೋಜನೆಗಳ ಭಾಗವಾಗಿದೆ. ಸಂಪರ್ಕ ರಹಿತ ಮತ್ತು ಗುಡ್ಡ ಗಾಡು ಪ್ರದೇಶಗಳಿಗೆ ಈ ಅರೋಗ್ಯ ಸೇತು ವಾಹನಗಳು ತೆರಳಿ ಅರೋಗ್ಯ ಸೇವೆ ನೀಡಲಿದೆ. ಈ ವಾಹನದಲ್ಲಿ ಒಬ್ಬ ವೈದ್ಯರು, ಒಬ್ಬರು ನರ್ಸ್ ಮತ್ತು ಒಬ್ಬ ಲ್ಯಾಬ್ ಟೆಕ್ನಿಷಿಯನ್ ಇರಲಿದ್ದಾರೆ. ಅಗತ್ಯವಿರುವ ಔಷದಿಗಳು, ಸಲಕರಣೆಗಳು, ತುರ್ತು ಅರೋಗ್ಯ ಪರಿಸ್ಥಿತಿಯ ನಿರ್ವಹಣೆಗೆ ಜೀವನಾವಶ್ಯಕ ಔಷಧಿಗಳೊಂದಿಗೆ ಈ ಆರೋಗ್ಯ ಸೇತು ವಾಹನವನ್ನು ಸಜ್ಜುಗೊಳಿಸಲಾಗಿದೆ. ಸ್ಥಳೀಯರಿಗೆ ಮುಂಗಡವಾಗಿ ತಿಳಿಸಿ ಸಂಚಾರಿ ಅರೋಗ್ಯ ಸೇವೆಗಳನ್ನು ನೀಡಲಾಗುವುದು ಎಂದರು. 

ಈ  ಸಂದರ್ಭ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಜಿಲ್ಲಾ ಪಂಚಾಯತ್ ಸಿ ಇ ಓ ವಿನಾಯಕ್ ನರ್ವಡೆ, ಜಿಲ್ಲಾ ಅರೋಗ್ಯಾಧಿಕಾರಿ ಡಾ ತಿಮ್ಮಯ್ಯ, ವೆನ್ ಲಾಕ್ ಅಧೀಕ್ಷಕ ಡಾ ಶಿವಪ್ರಕಾಶ್, ಲೇಡಿಘೋಶನ್ ಅಧೀಕ್ಷಕ ಡಾ ದುರ್ಗಾ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಿಗೆ ಮನೆ ಬಾಗಿಲ್ಲೇ ಆರೋಗ್ಯ ಸೇವೆ ನೀಡುವ ವಾಹನಕ್ಕೆ ಮಂಗಳೂರಿನಲ್ಲಿ ಉಸ್ತುವಾರಿ ಸಚಿವರಿಂದ ಚಾಲನೆ Rating: 5 Reviewed By: karavali Times
Scroll to Top