ಬಂಟ್ವಾಳ ಸಿಪಿಐ(ಎಂ) ಪಕ್ಷದ ಹಿರಿಯ ಮುಖಂಡ ಸಂಜೀವ ಬಂಗೇರ ಇನ್ನಿಲ್ಲ
ಬಂಟ್ವಾಳ, ಜನವರಿ 14, 2026 (ಕರಾವಳಿ ಟೈಮ್ಸ್) : ಬಂಟ್ವಾಳ ಸಮೀಪದ ಜಕ್ರಿಬೆಟ್ಟು ನಿವಾಸಿ, ಸಿಪಿಐ (ಎಂ) ಪಕ್ಷದ ಹಿರಿಯ ಧುರೀಣ ಬಂಟ್ವಾಳ ಸಂಜೀವ ಬಂಗೇರ (87) ಅವರು ವಯೋ ಸಹಜ ಅನಾರೋಗ್ಯದಿಂದ ಜನವರಿ 13 ರಂದು ರಾತ್ರಿ 11 ಗಂಟೆ ವೇಳೆಗೆ ಸ್ವಗೃಹದಲ್ಲಿ ನಿಧನರಾದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಪಿಐ(ಎಂ) ಪಕ್ಷದಲ್ಲಿ ಸಕ್ರಿಯರಾಗಿದ್ದ ಇವರು ಬಂಟ್ವಾಳ ತಾಲೂಕು ಬೀಡಿ ಕೆಲಸಗಾರರ ಸಂಘ (ಸಿಐಟಿಯು) ದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಹಲವು ಜನಪರ ಹೋರಾಟಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಕಳೆದ ಕೆಲ ಸಮಯಗಳಿಂದ ಮನೆಯಲ್ಲೆ ವಿಶ್ರಾಂತಿಯಲ್ಲಿದ್ದು, ವಯೋ ಸಹಜ ಅನಾರೋಗ್ಯದಿಂದ ಇದ್ದವರು ಮಂಗಳವಾರ ಬೆಳಿಗ್ಗೆ ಉಪಾಹಾರ ಮುಗಿಸಿದ್ದರು. ಮಧ್ಯಾಹ್ನದ ಬಳಿಕ ತೀವ್ರ ಅಸ್ವಸ್ಥರಾಗಿದ್ದ ಇವರು ರಾತ್ರಿ ವೇಳೆಗೆ ನಿಧನರಾದರು.
ಮೃತರು ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕಾಧ್ಯಕ್ಷ, ಸ್ವರ್ಣೋದ್ಯಮಿ ವಿಶ್ವನಾಥ ಬಂಟ್ವಾಳ, ಬಂಟ್ವಾಳ ಪುರಸಭಾ ಮಾಜಿ ಸದಸ್ಯ ಪ್ರವೀಣ್ ಜಕ್ರಿಬೆಟ್ಟು ಸಹಿತ ನಾಲ್ವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು-ಬಳಗ ಹಾಗೂ ಅಭಿಮಾನಿ ವರ್ಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಜನವರಿ 14 ರ ಬುಧವಾರ ಬೆಳಿಗ್ಗೆ 11 ಗಂಟೆ ವೇಳೆಗೆ ನೆರೆವೇರಲಿದೆ ಎಂದು ಪುತ್ರ ವಿಶ್ವನಾಥ ಬಂಟ್ವಾಳ ತಿಳಿಸಿದ್ದಾರೆ.












0 comments:
Post a Comment