ಕರಾವಳಿ ಉತ್ಸವ ಪ್ರಯುಕ್ತ ಕದ್ರಿ ಪಾಕ್ ರಸ್ತೆಯಲ್ಲಿ 3 ದಿನಗಳ ಕಾಲ ಸ್ಟ್ರೀಟ್ ಫುಡ್ ಫೆಸ್ಟಿವಲ್ - Karavali Times ಕರಾವಳಿ ಉತ್ಸವ ಪ್ರಯುಕ್ತ ಕದ್ರಿ ಪಾಕ್ ರಸ್ತೆಯಲ್ಲಿ 3 ದಿನಗಳ ಕಾಲ ಸ್ಟ್ರೀಟ್ ಫುಡ್ ಫೆಸ್ಟಿವಲ್ - Karavali Times

728x90

30 January 2026

ಕರಾವಳಿ ಉತ್ಸವ ಪ್ರಯುಕ್ತ ಕದ್ರಿ ಪಾಕ್ ರಸ್ತೆಯಲ್ಲಿ 3 ದಿನಗಳ ಕಾಲ ಸ್ಟ್ರೀಟ್ ಫುಡ್ ಫೆಸ್ಟಿವಲ್

ಮಂಗಳೂರು, ಜನವರಿ 30, 2026 (ಕರಾವಳಿ ಟೈಮ್ಸ್) : ಕರಾವಳಿ ಉತ್ಸವದ ಅಂಗವಾಗಿ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ 3 ದಿನಗಳ ಕಾಲ ನಡೆಯುವ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ಚಾಲನೆ ನೀಡಿದ ಖ್ಯಾತ ಚೆಫ್ ಶ್ರೀಯಾ ಶೆಟ್ಟಿ ಚಾಲನೆ ಮಾತನಾಡಿ, ಕರಾವಳಿ ಕರ್ನಾಟಕದ ಜನತೆಯ ಆಹಾರ ಅಭಿರುಚಿಯು ಬಹಳ ವಿಶಿಷ್ಟವಾಗಿದೆ. ತಿಂಡಿ-ತಿನಿಸುಗಳ ಬಗ್ಗೆ ಇಲ್ಲಿನ ಜನರ ಪ್ರೀತಿಯು ಆಹಾರ ಸಂಸ್ಕೃತಿಯನ್ನು ಎತ್ತರಕ್ಕೆ ಕೊಂಡೊಯ್ದಿದೆ. ವೈವಿಧ್ಯಮಯ ಖಾದ್ಯಗಳಿಗೆ ಕರಾವಳಿಯು ಹೆಸರುವಾಸಿಯಾಗಿದೆ ಎಂದರು. 

ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಮಾತನಾಡಿ, ಈ ವರ್ಷದ ಕರಾವಳಿ ಉತ್ಸವದ ಅಂಗವಾಗಿ ನಡೆದ ಎಲ್ಲ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಜನರಲ್ ಮ್ಯಾನೇಜರ್ ರಾಜೇಂದ್ರ ಕುಮಾರ್, ಡಿ ಜಿ ಎಂ ತೇಜಸ್ವಿನಿ, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಯತೀಶ್ ಬೈಕಂಪಾಡಿ ಮೊದಲಾದವರು ಭಾಗವಹಿಸಿದ್ದರು. 

3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್

ಸ್ಟ್ರೀಟ್ ಫುಡ್ ಫೆಸ್ಟ್ ಕಾರ್ಯಕ್ರಮ ಭಾನುವಾರದವರೆಗೆ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯಲಿದ್ದು, ಆಕರ್ಷಕ ತಿಂಡಿ-ತಿನಿಸುಗಳು, ಚಾಟ್ಸ್, ಪಾನೀಯಗಳು, ಸಸ್ಯಹಾರ ಮತ್ತು ಮಾಂಸಾಹಾರ ಖಾದ್ಯಗಳ ಸ್ಟಾಲ್ ಗಳನ್ನು ಒಳಗೊಂಡಿದೆ. ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಕರಾವಳಿ ಉತ್ಸವ ಪ್ರಯುಕ್ತ ಕದ್ರಿ ಪಾಕ್ ರಸ್ತೆಯಲ್ಲಿ 3 ದಿನಗಳ ಕಾಲ ಸ್ಟ್ರೀಟ್ ಫುಡ್ ಫೆಸ್ಟಿವಲ್ Rating: 5 Reviewed By: karavali Times
Scroll to Top