ಪುತ್ತೂರು, ಜನವರಿ 22, 2026 (ಕರಾವಳಿ ಟೈಮ್ಸ್) : ಮಹಿಳಾ ಪೊಲೀಸ್ ಠಾಣೆಯಲ್ಲಿ ಪತ್ನಿ ದೂರು ನೀಡಿದ ಕಾರಣಕ್ಕೆ ಪತಿ ನ್ಯಾಯಾಲಯದ ಸಂಕೀರ್ಣಕ್ಕೆ ತೆರಳಿ ನ್ಯಾಯಾಲಯದ ಒಳಗೆ ಪ್ರವೇಶಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ಗುರುವಾರ ಸಂಭವಿಸಿದೆ.
ವಿಷ ಸೇವಿಸಿ ನ್ಯಾಯಾಲಯದ ಒಳಗೆ ಆತ್ಮಹತ್ಯೆಗೆ ಯತ್ನಿಸಿದಾತನನ್ನು ಪುತ್ತೂರು-ಕಾವು ಮಾಡನ್ನೂರು ಗ್ರಾಮದ ನಿವಾಸಿ ರವಿ ಎಂದು ಹೆಸರಿಸಲಾಗಿದೆ. ಈತನ ಪತ್ನಿ ವೈವಾಹಿಕ ಮನಸ್ತಾಪದ ಹಿನ್ನಲೆಯಲ್ಲಿ, ಪುತ್ತೂರು ಮಹಿಳಾ ಪೆÇಲೀಸ್ ಠಾಣೆಯಲ್ಲಿ ದೂರು ನೀಡಲು ಮುಂದಾಗಿರುತ್ತಾರೆ. ಈ ಬಗ್ಗೆ ಮಾಹಿತಿ ತಿಳಿದ ಸದ್ರಿ ರವಿ ಪುತ್ತೂರು ನ್ಯಾಯಾಲಯದ ಸಂಕೀರ್ಣಕ್ಕೆ ತೆರಳಿ ನ್ಯಾಯಾಲಯದ ಒಳಗೆ ಪ್ರವೇಶಿಸಿ, ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಆತನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.
ನ್ಯಾಯಾಲಯದ ಸಂಕೀರ್ಣದಲ್ಲಿ ಘಟನೆ ನಡೆದಿರುವುದರಿಂದ ನ್ಯಾಯಾಧೀಶರು ಈ ಬಗ್ಗೆ ಸ್ವಯಂ ದೂರನ್ನು ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ತಿಳಿಸಿದ್ದಾರೆ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.












0 comments:
Post a Comment