ಬಂಟ್ವಾಳ, ಜನವರಿ 06, 2026 (ಕರಾವಳಿ ಟೈಮ್ಸ್) : ಬಿ ಸಿ ರೋಡು ಸಮೀಪದ ತಲಪಾಡಿ ಎಂಬಲ್ಲಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿ ಬಿದ್ದ ಘಟನೆ ಮಂಗಳವಾರ ನಸುಕಿನ ವೇಳೆ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಲಾರಿ ಮಗುಚಿ ಬಿದ್ದಿದ್ದು, ಈ ಘಟನೆಯಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತು. ಕೈಕಂಬದ ತಲಪಾಡಿಯ ವಿದ್ಯುತ್ ಪವರ್ ಸಬ್ ಸ್ಟೇಶನ್ ಎದುರಲ್ಲೇ ಘಟನೆ ನಡೆದಿದ್ದು, ವಿದ್ಯುತ್ ತಂತಿಗಳು ಹೆದ್ದಾರಿಯಲ್ಲಿ ತುಂಡಾಗಿ ಬಿದ್ದು ಪರಿಸರದಲ್ಲಿ ಸಂಜೆವರೆಗೂ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಘಟನಾ ಸ್ಥಳಕ್ಕೆ ಪೆÇಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.





















0 comments:
Post a Comment