ಜನವರಿ 15 ರಿಂದ ಮಾರ್ಚ್ 15ರವರೆಗೆ ಅಸಂಘಟಿತ ಕಾರ್ಮಿಕರ ವಿಶೇಷ ನೋಂದಣಿ ಅಭಿಯಾನ - Karavali Times ಜನವರಿ 15 ರಿಂದ ಮಾರ್ಚ್ 15ರವರೆಗೆ ಅಸಂಘಟಿತ ಕಾರ್ಮಿಕರ ವಿಶೇಷ ನೋಂದಣಿ ಅಭಿಯಾನ - Karavali Times

728x90

13 January 2026

ಜನವರಿ 15 ರಿಂದ ಮಾರ್ಚ್ 15ರವರೆಗೆ ಅಸಂಘಟಿತ ಕಾರ್ಮಿಕರ ವಿಶೇಷ ನೋಂದಣಿ ಅಭಿಯಾನ

ಮಂಗಳೂರು, ಜನವರಿ 13, 2026 (ಕರಾವಳಿ ಟೈಮ್ಸ್) : ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ ಹಾಗೂ ನ್ಯಾಷನಲ್ ಪೆನ್ಷನ್ ಸ್ಕೀಂ ಫಾರ್ ದಿ ಟ್ರೇಡರ್ಸ್ ಆಂಡ್ ಸೆಲ್ಫ್ ಎಂಪ್ಲಾಯ್ಡ್ ಪರ್ಸನ್ಸ್ (ಎನ್ ಪಿ ಎಸ್-ಟ್ರೇಡರ್ಸ್) ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೊಂದಾಯಿಸಲು ಜನವರಿ  15 ರಿಂದ  ಮಾರ್ಚ್ 15ರವರೆಗೆ ವಿಶೇóಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. 

       18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಬಹುದು. ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ 55 ರೂಪಾಯಿನಿಂದ 200 ರೂಪಾಯಿವರೆಗೆ ವಂತಿಗೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಸೌಲಭ್ಯ ಪಡೆಯಬಹುದು. 

ಯೋಜನೆಯಡಿ ನರೇಗಾ ಕಾರ್ಮಿಕರು, ಎಸ್ ಎಚ್ ಜಿ ಸದಸ್ಯರು, ಕೃಷಿ ಕಾರ್ಮಿಕರು, ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿಯೂಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು ಹಾಗೂ ಇನ್ನಿತರ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಮೊದಲ ತಿಂಗಳ ವಂತಿಗೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ನಗರದ ಯೆಯ್ಯಾಡಿ ಕಾರ್ಮಿಕ ಭವನದಲ್ಲಿರುವ ಕಾರ್ಮಿಕ ಅಧಿಕಾರಿಯವರ ಕಛೇರಿ  ಅಥವಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಜನವರಿ 15 ರಿಂದ ಮಾರ್ಚ್ 15ರವರೆಗೆ ಅಸಂಘಟಿತ ಕಾರ್ಮಿಕರ ವಿಶೇಷ ನೋಂದಣಿ ಅಭಿಯಾನ Rating: 5 Reviewed By: karavali Times
Scroll to Top