ಬಂಟ್ವಾಳ, ಜನವರಿ 31, 2026 (ಕರಾವಳಿ ಟೈಮ್ಸ್) : ಬೈಕ್ ಡಿಕ್ಕಿಯಾಗಿ ಮಹಿಳೆ ಗಾಯಗೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಬೊಬ್ಬೆಕೇರಿ ಕಟ್ಟೆ ಬಳಿ ಶುಕ್ರವಾರ ಸಂಭವಿಸಿದೆ.
ಗಾಯಗೊಂಡ ಮಹಿಳೆಯನ್ನು ವಿಟ್ಲ ಕಸಬಾ ಗ್ರಾಮದ ನಿವಾಸಿ ಲಲಿತಾ ಎಂದು ಹೆಸರಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಲ್ಲಡ್ಕ ಕಡೆಯಿಂದ ಮೊಹಮ್ಮದ್ ಹರ್ಷದ್ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಲಲತಾ ಅವರ ತಲೆ ಹಾಗೂ ಕಾಲಿಗೆ ಗಾಯವಾಗಿದ್ದು, ಅವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಿ ಬಳಿಕ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














0 comments:
Post a Comment