ಮಂಗಳೂರು, ಜನವರಿ 28, 2026 (ಕರಾವಳಿ ಟೈಮ್ಸ್) : ಬಡ ಮಧ್ಯಮ ವರ್ಗದ ಜನರಿಗೆ ಅನುಕೂಲ ಆಗಬೇಕೆಂಬ ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯನ್ನು 70 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಹಂತದಲ್ಲಿ ವಿಸ್ತರಿಸಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮೊದಲನೇ ಹಂತದಲ್ಲಿ 35 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಎರಡು ಅಂತಸ್ತಿನ ಒಪಿಡಿ ವಿಭಾಗವನ್ನು ನಿರ್ಮಾಣ ಮಾಡಲು ಸದ್ಯದಲ್ಲಿಯೇ ಟೆಂಡರ್ ಆಹ್ವಾನಿಸಲಾಗುವುದು. ಈ ಕಟ್ಟಡದಲ್ಲಿ ಸೌರ ವಿದ್ಯುತ್ ಘಟಕವೂ ಇರಲಿದ್ದು, ಸಿಸಿ ಟಿವಿ ಅಳವಡಿಸಲಾಗುವುದು. ವೆನ್ಲಾಕ್ ಆಸ್ಪತ್ರೆಯನ್ನು ಒಂದು ರೀತಿಯ ಮಾದರಿ ಆಸ್ಪತ್ರೆಯಾಗಿ ನಿರ್ಮಾಣ ಮಾಡುವುದು ಆರೋಗ್ಯ ಇಲಾಖೆಯ ಗುರಿಯಾಗಿದ್ದು, ಎಲ್ಲ ರೀತಿಯ ಸೌಲಭ್ಯ ದೊರೆಯಬೇಕು ಮತ್ತು ಸಾರ್ವಜನಿಕರಿಗೆ ಅನುಕೂಲವಾಗಬೇಕು ಎಂದು ಗುಂಡೂರಾವ್ ತಿಳಿಸಿದ್ದಾರೆ.














0 comments:
Post a Comment