ಸರಕಾರದ ವಿವಿಧ ಯೋಜನೆಗಳನ್ನು ಜಿಲ್ಲೆಗೆ ಆಕರ್ಷಿಸಲು ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ - Karavali Times ಸರಕಾರದ ವಿವಿಧ ಯೋಜನೆಗಳನ್ನು ಜಿಲ್ಲೆಗೆ ಆಕರ್ಷಿಸಲು ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ - Karavali Times

728x90

8 January 2026

ಸರಕಾರದ ವಿವಿಧ ಯೋಜನೆಗಳನ್ನು ಜಿಲ್ಲೆಗೆ ಆಕರ್ಷಿಸಲು ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ

 ಮಂಗಳೂರು, ಜನವರಿ 08, 2026 (ಕರಾವಳಿ ಟೈಮ್ಸ್) : ಕರಾವಳಿ ಕರ್ನಾಟಕಕ್ಕೆ ಸಾಗರಮಾಲಾ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ತರಲು ಇರುವ ಅವಕಾಶಗಳು, ಸಾಧ್ಯತೆಗಳು ಹಾಗೂ ಸಂಯೋಜಿತ ಕಾರ್ಯತಂತ್ರಗಳ ಕುರಿತು, ಕರಾವಳಿ ಅಭಿವೃದ್ಧಿ ಮಂಡಳಿಯ  ಅಧ್ಯಕ್ಷ ಎಂ.ಎ. ಗಫೂರ್ ಅವರ ಅಧ್ಯಕ್ಷತೆಯಲ್ಲಿ ಜನವರಿ 8 ರಂದು ನಡೆಯಿತು. 

ಸಭೆಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿ ಆರ್ ಝಡ್), ಕರ್ನಾಟಕ ಮೆರಿಟೈಮ್ ಬೋರ್ಡ್, ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ (ಕೆ ಎಫ್ ಡಿ ಸಿ) ಹಾಗೂ ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿ, ತಮ್ಮ ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿನ ಮಾಹಿತಿಯನ್ನು ಮಂಡಿಸಿದರು.

ಎಲ್ಲಾ ಇಲಾಖೆಗಳಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅಧ್ಯಕ್ಷರು  ಮಾತನಾಡಿ, ಮುಂದಿನ ದಿನಗಳಲ್ಲಿ ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು  ಮಾಹಿತಿ ನೀಡಿದರು.

     ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಡಿ’ಸೋಜಾ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಮಂಜುನಾಥ್ ಆರ್. ಶೆಟ್ಟಿ ಹಾಗೂ ಮಂಡಳಿಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಸರಕಾರದ ವಿವಿಧ ಯೋಜನೆಗಳನ್ನು ಜಿಲ್ಲೆಗೆ ಆಕರ್ಷಿಸಲು ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ Rating: 5 Reviewed By: karavali Times
Scroll to Top