ಬಂಟ್ವಾಳ, ಫೆಬ್ರವರಿ 25, 2026 (ಕರಾವಳಿ ಟೈಮ್ಸ್) : ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಮೂವರನ್ನು ವಿಟ್ಲ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ವಿಟ್ಲ ಪಿಎಸ್ಸೈ ರತ್ನಕುಮಾರ್ ನೇತೃತ್ವದ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಆರೋಪಿಗಳಾದ ಪ್ರತಾಪ ಎಚ್ ಎನ್ ಅಲಿಯಾಸ್ ಅಬ್ಬು (32), ಸಿದ್ದೀಕ್ (40) ಹಾಗೂ ಜಯಂತ ಅಲಿಯಾಸ್ ಕ್ಯಾಟ್ (24) ಎಂಬವರನ್ನು ಬಂಧಿಸಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಇವರು ಮಾದಕ ದ್ರವ್ಯ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲೂ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















0 comments:
Post a Comment