ಮಂಗಳೂರು, ಫೆಬ್ರವರಿ 27, 2026 (ಕರಾವಳಿ ಟೈಮ್ಸ್) : ವೇಣೂರು ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 15/2021, ಕಲಂ 452,354(ಎ),506 ಐಪಿಸಿ ಮತ್ತು ಕಲಂ 3(1)(ಡಬ್ಲ್ಯು)(1), 3(2)(5ಎ) ಎಸ್ ಸಿ. ಎಸ್ ಟಿ ಕಾಯ್ದೆ ಪ್ರಕರಣದಲ್ಲಿ ಆರೋಪಿ ಖಾಲಿದ್ ಅಲಿಯಾಸ್ ಅಬ್ದುಲ್ ಖಾದರ್ ಎಂಬಾತನಿಗೆ ನ್ಯಾಯಾಲಯ 1 ವರ್ಷ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪಿತ್ತಿದೆ.
ಪ್ರಕರಣದ ತನಿಖಾಧಿಕಾರಿ ಬಂಟ್ವಾಳ ಎಎಸ್ಪಿ ಆಗಿದ್ದ ವ್ಯಾಲೆಂಟೈನ್ ಡಿ’ಸೋಜಾ ಅವರು ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ ಎನ್ ಅವರು ಫೆ 26 ರಂದು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ್ ಅವರು ವಾದ ಮಂಡಿಸಿದ್ದಾರೆ.















0 comments:
Post a Comment