ಬಂಟ್ವಾಳ, ಫೆಬ್ರವರಿ 21, 2026 (ಕರಾವಳಿ ಟೈಮ್ಸ್) : ಜಾತಿ ನಿಂದನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷ ವಿಧಿಸಿ ನ್ಯಾಯಾಲಯ ತೀರ್ಪಿತ್ತಿದೆ.
2019 ರ ಮೇ 6 ರಂದು ವಿಟ್ಲ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ವ್ಯಕ್ತಿಯೊಬ್ಬರ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜಾತಿನಿಂದನೆ ಮಾಡಿ, ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿದಂತೆ, ವಿಟ್ಲ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ನಾರಾಯಣ ಗೌಡ ಎಂಬಾತನಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಅಂದಿನ ತನಿಖಾಧಿಕಾರಿ ಬಂಟ್ವಾಳ ಎಎಸ್ಪಿ ಸೈದುಲ್ ಅಡಾವತ್ ಅವರು ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಆರೋಪಿ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸದ್ರಿ ಪ್ರಕರಣವು ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು 2025ರ ಜನವರಿ 30 ರಂದು ಆರೋಪಿ ನಾರಾಯಣ ಗೌಡ ಎಂಬಾತನಿಗೆ ನ್ಯಾಯಾಲಯವು ಕಲಂ 447, 324 ಮತ್ತು 504 ಐಪಿಸಿಯಡಿಯಲ್ಲಿ ಶಿಕ್ಷೆ ಪ್ರಕಟಿಸಿ 500, 10,000 ಮತ್ತು 10,000 ದಂಡ ಪಾವತಿಸಲು ಒಂದು ವೇಳೆ ದಂಡ ಪಾವತಿಸಲು ನಿರಾಕರಿಸಿದಲ್ಲಿ ಕ್ರಮವಾಗಿ 3 ತಿಂಗಳು, 6 ತಿಂಗಳು, 6 ತಿಂಗಳು ಕಾರಾಗೃಹ ವಾಸಕ್ಕೆ ಅಂತಿಮ ಆದೇಶ ಹೊರಡಿಸಿದೆ. ಈ ಪ್ರಕರಣದ ವಿಚಾರಣಾ ಸಮಯದಲ್ಲಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 2022 ರ ಅಕ್ಟೋಬರ್ 7 ರಂದು ವಿಟ್ಲ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಯುವತಿ ಜೊತೆ ಆರೋಪಿ ಉಸ್ಮಾನ್ ಎಂಬಾತ ಅನುಚಿತವಾಗಿ ವರ್ತಿಸಿ, ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ, ವಿಟ್ಲ ಪೆÇಲೀಸ್ ಠಾಣೆಯಲ್ಲಿ 2022 ರ ಅಕ್ಟೋಬರ್ 11 ರಂದು ದಾಖಲಾಗಿದ್ದ ಪ್ರಕರಣದಲ್ಲಿ ಅಂದಿನ ತನಿಖಾಧಿಕಾರಿ ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ಅವರು ಘಟನೆಯ ಬಗ್ಗೆ ತನಿಖೆ ನಡೆಸಿ ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಆರೋಪಿ ವಿರುದ್ದ ದೋಷಾರೋಪಣಾ ಪಟ್ಟಿ ಸಲ್ಲಿಸಿದದರು. ಸದ್ರಿ ಪ್ರಕರಣವು ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಫೆಬ್ರವರಿ 20ರಂದು ಆರೋಪಿ ಉಸ್ಮಾನ್ ಎಂಬಾತನಿಗೆ ನ್ಯಾಯಾಲಯವು ಕಲಂ 354, 506 ಐಪಿಸಿ ಮತ್ತು 3(1)(ಡಬ್ಲ್ಯು), 3(2)(ವಿಎ) ಎಸ್ ಸಿ/ ಎಸ್ ಟಿ ಕಾಯ್ದೆಯಡಿ ಶಿಕ್ಷೆ ವಿಧಿಸಿದ್ದು, ಆರೋಪಿಗೆ ಒಂದು ವರ್ಷ ಸರಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ಪಾವತಿಸಲು ವಿಫಲವಾದರೆ, ಹೆಚ್ಚುವರಿಯಾಗಿ ಆರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಐಪಿಸಿ ಕಲಂ 506ನೇದಕ್ಕೆ ಆರೋಪಿಗೆ ಆರು ತಿಂಗಳ ಸರಳ ಜೈಲು ಶಿಕ್ಷೆ ಮತ್ತು 5 ಸಾವಿರ ರೂಪಾಯಿ ದಂಡ ಪಾವತಿಸಲು ಆದೇಶಿಸಿದೆ ವಿಫಲವಾದರೆ, ಹೆಚ್ಚುವರಿಯಾಗಿ 15 ದಿನಗಳ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯವು ಅಂತಿಮ ಆದೇಶ ನೀಡಿದೆ. ಪ್ರಕರಣದ ವಿಚಾರಣಾ ಸಮಯದಲ್ಲಿ ಸರ್ಕಾರಿ ಅಭಿಯೋಜಕರಾದ ಜ್ಯೋತಿ ನಾಯ್ಕ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿರುತ್ತಾರೆ.















0 comments:
Post a Comment