ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಲಾದ್ರು ಮೆನೇಜಸ್ ನೇಮಕ - Karavali Times ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಲಾದ್ರು ಮೆನೇಜಸ್ ನೇಮಕ - Karavali Times

728x90

20 February 2026

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಲಾದ್ರು ಮೆನೇಜಸ್ ನೇಮಕ

ಬಂಟ್ವಾಳ, ಫೆಬ್ರವರಿ 20, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ (ಗ್ರಾಮಾಂತರ) ವತಿಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಲಾದ್ರು ಮೆನೇಜಸ್ ಅವರು ನೇಮಕಗೊಂಡಿದ್ದಾರೆ.

ಮಾಜಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ನಿರ್ದೇಶನದಂತೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ (ಗ್ರಾಮಾಂತರ) ಪ್ರಚಾರ ಸಮಿತಿ ಅಧ್ಯಕ್ಷ ಎಚ್ ಮಹಮ್ಮದ್ ಆಲಿ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. 

ಲಾದ್ರು ಮೆನೇಜಸ್ ಅವರು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಚೆನ್ನೈತ್ತೋಡಿ ಗ್ರಾಮದಲ್ಲಿ ಬೂತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಲಾದ್ರು ಮೆನೇಜಸ್ ನೇಮಕ Rating: 5 Reviewed By: karavali Times
Scroll to Top