ತಾಲೂಕು ಮಟ್ಟದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿ ಆಹ್ವಾನ - Karavali Times ತಾಲೂಕು ಮಟ್ಟದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿ ಆಹ್ವಾನ - Karavali Times

728x90

10 February 2026

ತಾಲೂಕು ಮಟ್ಟದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿ ಆಹ್ವಾನ

ಮಂಗಳೂರು, ಫೆಬ್ರವರಿ 10, 2026 (ಕರಾವಳಿ ಟೈಮ್ಸ್) : ವಾರ್ತಾ ಮತ್ತು ಸಾರ್ವನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣ ಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನ ಪತ್ರ (ಲೈನೇಜ್/ ಸಂಭಾವನೆ/ ಕಮೀಷನ್ ಪಡೆದಿರುವ ದಾಖಲೆ) ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟ್ ಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದು. 

ಆನ್ ಲೈನ್ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. 

ರಾಜ್ಯದ ಎಲ್ಲ ತಾಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದರ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತÀ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ತಾಲೂಕು ಮಟ್ಟದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿ ಆಹ್ವಾನ Rating: 5 Reviewed By: karavali Times
Scroll to Top