ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 11 ಲಕ್ಷಕ್ಕೂ ಹೆಚ್ಚು ಮೌಲ್ಯದ ಎಂಡಿಎಂಎ ಸಹಿತ ಮೂವರ ದಸ್ತಗಿರಿ - Karavali Times ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 11 ಲಕ್ಷಕ್ಕೂ ಹೆಚ್ಚು ಮೌಲ್ಯದ ಎಂಡಿಎಂಎ ಸಹಿತ ಮೂವರ ದಸ್ತಗಿರಿ - Karavali Times

728x90

13 February 2026

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 11 ಲಕ್ಷಕ್ಕೂ ಹೆಚ್ಚು ಮೌಲ್ಯದ ಎಂಡಿಎಂಎ ಸಹಿತ ಮೂವರ ದಸ್ತಗಿರಿ

ಮಂಗಳೂರು, ಫೆಬ್ರವರಿ 13, 2026 (ಕರಾವಳಿ ಟೈಮ್ಸ್) : ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತು ಎಂಡಿಎಂಎ ತಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಗುರುವಾರ  ಬೇಧಿಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ ಸೊತ್ತುಗಳನ್ನುವಶಪಡಿಸಿಕೊಂಡಿದ್ದಾರೆ. 

ಬಂಧಿತ ಆರೋಪಿಗಳನ್ನು ಉಳ್ಳಾಲ ಬಸ್ತಿಪಡ್ಪು ಗಣೇಶ್ ಬೀಡಿ ವಕ್ರ್ಸ್ ಹತ್ತಿರದ ಮುಸ್ತಫಾ ಮಂಝಿಲ್ ನಿವಾಸಿ ಸೀದಿಯಬ್ಬ ಅವರ ಪುತ್ರ ಮುಸ್ತಫಾ ಸೀದಿಯಬ್ಬ (34), ಉಳ್ಳಾಲ ಮಾಸ್ತಿಕಟ್ಟೆ ಜಂಕ್ಷನ್ನಿನ ಕಟ್ಟಿಗೆ ಡಿಪೋ ಹಿಂದುಗಡೆಯ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಅಬ್ದುಲ್ಲಾ ಎಂಬವರ ಪುತ್ರ ಮೈಯದ್ದಿ (28) ಹಾಗೂ ಉಳ್ಳಾಲ-ಮುಕ್ಕಚ್ಚೇರಿ ನಿವಾಸಿ ಉಮ್ಮರ್ ಫಾರೂಕ್ ಎಂಬವರ ಪುತ್ರ ಮೊಹಮ್ಮದ್ ಶಿಫಾನ್ (28) ಎಂದು ಹೆಸರಿಸಲಾಗಿದೆ. 

ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೂದು ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೆÇಲೀಸರು ಫೆಬ್ರವರಿ 12ರಂದು ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಬಂಧಿತ ಆರೋಪಿಗಳಿಂದ 11.90 ಲಕ್ಷ ರೂಪಾಯಿ ಮೌಲ್ಯದ 118.13 ಗ್ರಾಂ ತೂಕದ ನಿಷೇದಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್ ಫೆÇೀನ್, ಕೆಎ19 ಎಂಕ್ಯೂ3420 ನೋಂದಣಿ ಸಂಖ್ಯೆಯ ಬೂದು ಬಣ್ಣದ ಸ್ವಿಫ್ಟ್ ಕಾರು ಸಹಿತ ಒಟ್ಟು 17.95 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 

ಆರೋಪಿ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೆÇಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. 

ಈ ಮಾದಕವಸ್ತು ಮಾರಾಟ/ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಹಿತಿ ನೀಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 11 ಲಕ್ಷಕ್ಕೂ ಹೆಚ್ಚು ಮೌಲ್ಯದ ಎಂಡಿಎಂಎ ಸಹಿತ ಮೂವರ ದಸ್ತಗಿರಿ Rating: 5 Reviewed By: karavali Times
Scroll to Top