ಪತ್ನಿಗೆ ಪತಿ ಹಾಗೂ ಮಾವ ಸೇರಿ ಹಲ್ಲೆ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಪತ್ನಿಗೆ ಪತಿ ಹಾಗೂ ಮಾವ ಸೇರಿ ಹಲ್ಲೆ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

4 February 2026

ಪತ್ನಿಗೆ ಪತಿ ಹಾಗೂ ಮಾವ ಸೇರಿ ಹಲ್ಲೆ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ, ಫೆಬ್ರವರಿ 04, 2026 (ಕರಾವಳಿ ಟೈಮ್ಸ್) : ಪತ್ನಿಯನ್ನು ಗಂಡ ಹಾಗೂ ಮಾವ ಸೇರಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ಬಗ್ಗೆ ಹಲ್ಲೆಗೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಫೆಬ್ರವರಿ 2 ರಂದು ರಾತ್ರಿ 7.30 ರ ವೇಳೆಗೆ ಮಹಿಳೆ ತನ್ನ ಮನೆಯ ಕೋಣೆಯಲ್ಲಿದ್ದಾಗ, ಮಾವ ಅಕ್ರಮ ಪ್ರವೇಶ ಮಾಡಿ ಅನುಚಿತವಾಗಿ ವರ್ತಿಸಿದ್ದಲ್ಲದೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುತ್ತಾರೆ. ಈ ಸಂದರ್ಭ ಮಹಿಳೆ ತಪ್ಪಿಸಿಕೊಂಡು ಹೊರಗೆ ಬಂದಾಗ ಗಂಡ ಕೂಡಾ ತಂದೆಯ ಪರವಾಗಿ ವರ್ತಿಸಿ ಚಿಕಿತ್ಸೆ ಕೊಡಿಸಲು ನಿರಾಕರಿಸಿರುತ್ತಾರೆ. ಬಳಿಕ ಮಹಿಳೆಯ ತಂದೆ-ತಾಯಿ ಅವರನ್ನು ಸಂಪಾಜೆ ಸರಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ   ಪ್ರಕರಣ ದಾಖಲಾಗಿದ್ದು, ಘಟಣಾ ಸ್ಥಳದ ಆದಾರದಲ್ಲಿ ಸುಳ್ಯ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಎಸ್ಪಿ ಮಾಹಿತಿ ನೀಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಪತ್ನಿಗೆ ಪತಿ ಹಾಗೂ ಮಾವ ಸೇರಿ ಹಲ್ಲೆ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top