ಮಂಗಳೂರು, ಫೆಬ್ರವರಿ 05, 2026 (ಕರಾವಳಿ ಟೈಮ್ಸ್) : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಫೆಬ್ರವರಿ 6 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಫೆಬ್ರವರಿ 6 ರಂದು ಮಧ್ಯಾಹ್ನ 1.40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಡಿಸಿಎಂ ಅಪರಾಹ್ನ 3.30ಕ್ಕೆ ಪುತ್ತೂರು ತಾಲೂಕಿನ ಕಾಂಚನ ಬಜತ್ತೂರು ಶ್ರೀ ಲಕ್ಷ್ಮಿ ನಾರಾಯಣ ಸಂಗೀತ ಕಲಾ ಶಾಲೆ ವತಿಯಿಂದ ಆಯೋಜಿಸಿರುವ ನೂತನ ಸಂಗೀತ ಕಲಾ ಶಾಲೆ, ಸಭಾ ಭವನ ಹಾಗೂ ಭೋಜನ ಶಾಲೆಯ ಲೋಕಾರ್ಪಣೆ ಹಾಗೂ 72ನೇ ವರ್ಷದ ಕಾಂಚನೋತ್ಸವ ಕಾರ್ಯಕ್ರಮ, ಸಂಜೆ 6ಕ್ಕೆ ಪುತ್ತೂರು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮ, ರಾತ್ರಿ ನಗರದಲ್ಲಿ ವಾಸ್ತವ್ಯ. ಫೆಬ್ರವರಿ 7 ರಂದು ಬೆಳಿಗ್ಗೆ 9.40ಕ್ಕೆ ಉಪಮುಖ್ಯಮಂತ್ರಿಗಳು ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
5 February 2026
- Blogger Comments
- Facebook Comments
Subscribe to:
Post Comments (Atom)














0 comments:
Post a Comment