ಜನಾರ್ದನ ಪೂಜಾರಿ ಸದಾ ಜನಪರ ಚಿಂತನೆಗಳೊಂದಿಗೆ ಕಾರ್ಯನಿರ್ವಹಿಸಿದವರು : ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣನೆ - Karavali Times ಜನಾರ್ದನ ಪೂಜಾರಿ ಸದಾ ಜನಪರ ಚಿಂತನೆಗಳೊಂದಿಗೆ ಕಾರ್ಯನಿರ್ವಹಿಸಿದವರು : ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣನೆ - Karavali Times

728x90

6 February 2026

ಜನಾರ್ದನ ಪೂಜಾರಿ ಸದಾ ಜನಪರ ಚಿಂತನೆಗಳೊಂದಿಗೆ ಕಾರ್ಯನಿರ್ವಹಿಸಿದವರು : ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣನೆ

ಬಂಟ್ವಾಳದ ಮನೆಯಲ್ಲಿ ಪೂಜಾರಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಉಪಮುಖ್ಯಮಂತ್ರಿ


ಬಂಟ್ವಾಳ, ಫೆಬ್ರವರಿ 06, 2026 (ಕರಾವಳಿ ಟೈಮ್ಸ್) : ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಶುಕ್ರವಾರ ಪುತ್ತೂರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿಸಿಎಂ ಅವರು ಈ ಮಧ್ಯೆ ಪೂಜಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. 

ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿರುವ ಜನಾರ್ದನ ಪೂಜಾರಿ ಅವರು ಸದಾ ಜನಪರ ಚಿಂತನೆಗಳೊಂದಿಗೆ ಕಾರ್ಯನಿರ್ವಹಿಸಿದವರು. ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದದ್ದು ಸಂತಸವನ್ನುಂಟು ಮಾಡಿತು ಎಂದು ಡಿಕೆಶಿ ಹೇಳಿದ್ದಾರೆ. 

ಈ ಸಂದರ್ಭ ಮಾಜಿ ಸಚಿವ ಬಿ ರಮಾನಾಥ ರೈ, ಪಕ್ಷ ಪ್ರಮುಖರಾದ ಇನಾಯತ್ ಅಲಿ, ಬೇಬಿ ಕುಂದರ್, ಹರೀಶ್ ಕುಮಾರ್, ಪದ್ಮರಾಜ್ ಆರ್ ಪೂಜಾರಿ ಮೊದಲಾದವರು ಜೊತೆಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಜನಾರ್ದನ ಪೂಜಾರಿ ಸದಾ ಜನಪರ ಚಿಂತನೆಗಳೊಂದಿಗೆ ಕಾರ್ಯನಿರ್ವಹಿಸಿದವರು : ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣನೆ Rating: 5 Reviewed By: karavali Times
Scroll to Top