ಬಂಟ್ವಾಳ, ಫೆಬ್ರವರಿ 24, 2026 (ಕರಾವಳಿ ಟೈಮ್ಸ್) : ಸ್ವಾತಂತ್ರ್ಯ ಹೋರಾಟಗಾರರಾದ ಡಾ ಅಮ್ಮೆಂಬಳ ಬಾಳಪ್ಪ ಅವರ ಹೆಸರಿನಲ್ಲಿ ನಾಮಕರಣಗೊಂಡಿರುವ ರಸ್ತೆ ಪೆÇಸಳ್ಳಿ, ದೈಪಲ, ಕಾಮಾಜೆ ಹಾಗೂ ಕುಲಾಲ ಮಠ ಗ್ರಾಮಗಳ ಮೂಲಕ ಹಾದು ಹೋಗುತ್ತಿದ್ದು, ಇದರ ಅಭಿವೃದ್ಧಿಗಾಗಿ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಪದಾಧಿಕಾರಿಗಳು ಶಾಸಕ ಯು ರಾಜೇಶ್ ನಾಯಕ್ ಅವರಿಗೆ ಫೆ 24 ರಂದು ಮನವಿ ಸಲ್ಲಿಸಿದರು.
ಬಿ ಸಿ ರೋಡಿನ ಶಾಸಕರ ಕಚೇರಿಯಲ್ಲಿ ಸಂಘದ ಪದಾಧಿಕಾರಿಗಳು ಮನವಿ ಪತ್ರ ನೀಡಿ, ರಸ್ತೆ ಅಭಿವೃದ್ಧಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸದ್ರಿ ರಸ್ತೆ ಅಭಿವೃದ್ದಿಗೆ ಕೋರಿದರು.
ಮನವಿ ಸ್ವೀಕರಿಸಿ ಪ್ರತಿಕ್ರಯಿಸಿದ ಶಾಸಕರ ರಾಜೇಶ್ ನಾಯಕ್ ಅವರು, ರಸ್ತೆ ಅಭಿವೃದ್ಧಿಯಾದರೆ ಗ್ರಾಮವೂ ಅಭಿವೃದ್ಧಿಯಾಗುತ್ತದೆ. ಇದರಿಂದ ಈ ಭಾಗದ ಗ್ರಾಮಸ್ಥರಿಗೆ ಸಂಚಾರ ಸುಗಮವಾಗಿ ವಿವಿಧ ಮೂಲಭೂತ ಸೌಕರ್ಯಗಳು ಸುಧಾರಣೆಯಾಗಲಿವೆ. ಆದಷ್ಟು ಬೇಗ ರಸ್ತೆ ಅಭಿವೃದ್ಧಿಗೆ ಯೋಜನೆ ರೂಪಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಬಿ ರಮೇಶ್ ಸಾಲ್ಯಾನ್ ಸಂಚಯಗಿರಿ, ಪ್ರಧಾನ ಕಾರ್ಯದರ್ಶಿ ಯಾದವ ಕುಲಾಲ್ ಅಗ್ರಬೈಲು, ಕಾರ್ಯಕಾರಿ ಸಮಿತಿ ಸದಸ್ಯ ಮಚ್ಚೇಂದ್ರ ಸಾಲ್ಯಾನ್, ಮಾಜಿ ಅಧ್ಯಕ್ಷ ಸತೀಶ್ ಕುಲಾಲ್ ನಿಯೋಗದಲ್ಲಿದ್ದರು.















0 comments:
Post a Comment