ಮಂಗಳೂರು, ಫೆಬ್ರವರಿ 19, 2026 (ಕರಾವಳಿ ಟೈಮ್ಸ್) : ಪುತ್ತೂರಿನಿಂದ ಸುಳ್ಯಕ್ಕೆ ಮಾದಕ ವಸ್ತು ಎಂಡಿಎಂ ಸಾಗಾಟ ಮಾಡುತ್ತಿದ್ದ ಪ್ರಕರಣ ಬೇಧಿಸಿದ ಪುತ್ತೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಫೆ 18 ರಂದು ನಡೆದಿದೆ.
ಬಂಧಿತ ಆರೋಪಿಗಳನ್ನು ಕೇರಳ ಕೋಝಿಕ್ಕೋಡ್ ನಿವಾಸಿಗಳಾದ ಮುಹಮ್ಮದ್ ಅಜ್ಮಲ್ ಅಲಿಯಾಸ್ ಅಜ್ಜು (30), ಸಂಶೀರ್ (27) ಹಾಗೂ ವಯನಾಡ್ ಜಿಲ್ಲೆ ನಿವಾಸಿ ಇಸ್ಮಾಯಿಲ್ (29) ಎಂದು ಹೆಸರಿಸಲಾಗಿದೆ. ಆರೋಪಿಗಳು ವಾಹನದಲ್ಲಿ ಮಾರಾಕಾಯುಧವಾದ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800/- ಮೌಲ್ಯದ 53.58 ಗ್ರಾಂ ಎಂಡಿಎಂಎ ಪತ್ತೆಯಾಗಿದೆ.
ಆರೋಪಿಗಳಿಂದ ಒಂದು ಕಾರು, ಮಾರಕಾಸ್ತ್ರ, ಮೊಬೈಲ್‍ಗಳು ಹಾಗೂ ನಗದು 10 ಸಾವಿರ ರೂಪಾಯಿ ವಶಪಡಿಸಿಕೊಂಡು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿ ತನಿಖೆ ನಡೆಸಲಾಗುತ್ತಿದೆ.
ಆರೋಪಿಗಳು ಕೇರಳ, ಗೋವಾ ಹಾಗೂ ಕರ್ನಾಟಕ ರಾಜ್ಯಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದು, ಕೇರಳ ರಾಜ್ಯದ ಕೋಝಿಕೋಡು, ಕಣ್ಣೂರು, ವಯನಾಡ್ ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿ, ತಲೆಮರೆಸಿಕೊಂಡಿರುವುದಾಗಿದೆ. ಅಲ್ಲದೆ ಮುಹಮ್ಮದ್ ಅಜ್ಮಲ್ ಸಿ ಅಲಿಯಾಸ್ ಅಜ್ಜು ಎಂಬಾತನು ಇತ್ತೀಚೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಪ್ರಕರಣದ ಆರೋಪಿಯಾಗಿರುತ್ತಾನೆ. ಅಜ್ಮಲ್ ಸಹಚರನಾದ ಇಸ್ಮಾಯಿಲ್ ಎಂಬಾತನ ಮೇಲೆ ಕೂಡ ಕೇರಳ ರಾಜ್ಯದ ಕೋಝಿಕೋಡು ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಬೇಧಿಸುವಲ್ಲಿ ಪುತ್ತೂರು ಎಎಸ್ಪಿ ಪ್ರಮೋದ್ ಕುಮಾರ್, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೆÇಲೀಸ್ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್, ದ.ಕ ಜಿಲ್ಲಾ ಡಿ.ಎಸ್.ಬಿ ವಿಭಾಗದ ಪೆÇಲೀಸ್ ಇನ್ಸ್ ಪೆಕ್ಟರ್ ನಂದಕುಮಾರ್, ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್ಸೈಗಳಾದ ಗುಣಪಾಲ ಹಾಗೂ ಸುಶ್ಮಾ ಜೆ ಭಂಡಾರಿ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ, ಪ್ರಶಾಂತ್ ರೈ, ಪ್ರಶಾಂತ್ ಎಂ, ಪ್ರವೀಣ್ ರೈ, ಹರ್ಷಿತ್, ಹಾಗೂ ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಪರಮೇಶ್ವರ ಗೌಡ, ಹರೀಶ್, ಸುಬ್ರಹ್ಮಣ್ಯ, ಬೀಮಸೇನ್, ಭವಿತ್ ರೈ, ನಾಗಾರಾಜ್, ಕಾರ್ತಿಕ್ ಜಿಲ್ಲಾ ಗಣಕ ಯಂತ್ರ ಸಿಬ್ಬಂದಿಗಳಾದ ದಿವಾಕರ್, ಸಂಪತ್ ಮತ್ತು ಗೃಹ ರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವಹಿಸಿದ್ದಾರೆ.














0 comments:
Post a Comment