ಕರಾವಳಿ ಅಭಿವೃದ್ದಿಗೆ ಅಗತ್ಯ ಅನುದಾನ ಒದಗಿಸುವಂತೆ ಗೃಹ ಸಚಿವರಿಗೆ ಮನವಿ - Karavali Times ಕರಾವಳಿ ಅಭಿವೃದ್ದಿಗೆ ಅಗತ್ಯ ಅನುದಾನ ಒದಗಿಸುವಂತೆ ಗೃಹ ಸಚಿವರಿಗೆ ಮನವಿ - Karavali Times

728x90

22 February 2026

ಕರಾವಳಿ ಅಭಿವೃದ್ದಿಗೆ ಅಗತ್ಯ ಅನುದಾನ ಒದಗಿಸುವಂತೆ ಗೃಹ ಸಚಿವರಿಗೆ ಮನವಿ

ಮಂಗಳೂರು, ಫೆಬ್ರವರಿ 22, 2026 (ಕರಾವಳಿ ಟೈಮ್ಸ್) : ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳು, ನೀತಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಗತ್ಯವಾದ ಅನುದಾನ ಹಂಚಿಕೆ ಮತ್ತು ಆಡಳಿತಾತ್ಮಕ ಅನುಮೋದನೆಗಳನ್ನು ಒದಗಿಸುವ ಕುರಿತು  ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಮನವಿಯನ್ನು ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಮಾಡುವಂತೆ ವಿನಂತಿಸಲಾಯಿತು.  

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಅಗತ್ಯ ಅನುದಾನವನ್ನು 2026-27ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ ಕಾಯ್ದಿರಿಸುವಂತೆ ಮತ್ತು ಪ್ರಮುಖ ಯೋಜನೆಗಳಿಗೆ ತ್ವರಿತ ಆಡಳಿತಾತ್ಮಕ ಅನುಮೋದನೆ ನೀಡಬೇಕು. ಕರಾವಳಿ ನಿಯಂತ್ರಣ ವಲಯ (ಸಿ ಆರ್ ಝಡ್) ಸುಧಾರಣೆ, ಬಂದರು ಮತ್ತು ಮೀನುಗಾರಿಕೆ ಮೂಲಸೌಕರ್ಯ, ಸಮಗ್ರ ಬೀಚ್ ಅಭಿವೃದ್ಧಿ, ಜಲ ಸಾರಿಗೆ, ಕೃಷಿ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ, ರಸ್ತೆ ಮತ್ತು ಸಂಪರ್ಕ ಅಭಿವೃದ್ಧಿ ಸೇರಿದಂತೆ ವಿವಿಧ ಪ್ರಮುಖ ವಿಷಯಗಳನ್ನು ಮನವಿಯಲ್ಲಿ ಒಳಗೊಂಡಿವೆ.

ಕರಾವಳಿ ಅಭಿವೃದ್ಧಿ ಮಂಡಳಿಯನ್ನು ಮೂರು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ನೋಡಲ್ ಏಜೆನ್ಸಿಯಾಗಿ ಬಲಪಡಿಸುವುದು, ಪ್ರಮುಖ ಯೋಜನೆಗಳಿಗೆ ಹಂತವಾರು ಅನುಷ್ಠಾನ ವೇಳಾಪಟ್ಟಿ ರೂಪಿಸುವುದು ಹಾಗೂ ಪ್ರತಿ ಕರಾವಳಿ ಜಿಲ್ಲೆಗೆ ವಿಶೇಷ ಅನುದಾನ ಪ್ಯಾಕೇಜ್ ಒದಗಿಸುವುದು ಎಂಬ ಶಿಫಾರಸುಗಳನ್ನೂ ಮನವಿಯಲ್ಲಿ ತಿಳಿಸಲಾಗಿದೆ.

     ಈ ಸಂದರ್ಭ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ ಎ ಗಫೂರ್, ಮಾಜಿ ಸಚಿವ ಬಿ ರಮಾನಾಥ ರೈ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೋ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಾಹೀದ್ ತೆಕ್ಕಿಲ್, ಕೆ.ಎಸ್.ಆರ್.ಟಿ.ಸಿ ಮಾಜಿ ನಿರ್ದೇಶಕ ಟಿ.ಕೆ ಸುಧೀರ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಶಬೀರ್ ಎಸ್ ಮೊದಲಾದವರು ಜೊತೆಗಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಕರಾವಳಿ ಅಭಿವೃದ್ದಿಗೆ ಅಗತ್ಯ ಅನುದಾನ ಒದಗಿಸುವಂತೆ ಗೃಹ ಸಚಿವರಿಗೆ ಮನವಿ Rating: 5 Reviewed By: karavali Times
Scroll to Top