ಫೆಬ್ರವರಿ 16 ರಿಂದ ಮಾನವ ಹಕ್ಕುಗಳ ಆಯೋಗ ದ.ಕ. ಹಾಗೂ ಉಡುಪಿ ಜಿಲ್ಲೆಗೆ ಭೇಟಿ - Karavali Times ಫೆಬ್ರವರಿ 16 ರಿಂದ ಮಾನವ ಹಕ್ಕುಗಳ ಆಯೋಗ ದ.ಕ. ಹಾಗೂ ಉಡುಪಿ ಜಿಲ್ಲೆಗೆ ಭೇಟಿ - Karavali Times

728x90

13 February 2026

ಫೆಬ್ರವರಿ 16 ರಿಂದ ಮಾನವ ಹಕ್ಕುಗಳ ಆಯೋಗ ದ.ಕ. ಹಾಗೂ ಉಡುಪಿ ಜಿಲ್ಲೆಗೆ ಭೇಟಿ

ಮಂಗಳೂರು, ಫೆಬ್ರವರಿ 14, 2026 (ಕರಾವಳಿ ಟೈಮ್ಸ್) : ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿನ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು  ಫೆಬ್ರವರಿ 16 ರಿಂದ 20 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿದೆ.  ಈ ಸಂದರ್ಭ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇರ್ತಥ್ಯಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. 

ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಿಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬಹುದು.  ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿಗದಿತ ದಿನಗಳಂದು ಸಾರ್ವಜನಿಕರಿಂದ ದೂರುಗಳು/  ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ನಿಗದಿತ ದಿನಾಂಕಗಳಂದು ಆಯೋಗದ ಅಧ್ಯಕ್ಷರನ್ನು (ಹಂಗಾಮಿ) ಹಾಗೂ ಸದಸ್ಯರನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದು. 

ಫೆಬ್ರವರಿ 18 ರಂದು ದಕ್ಷಿಣ ಕನ್ನಡ ಹಾಗೂ ಫೆಬ್ರವರಿ 19 ರಂದು ಉಡುಪಿ ಜಿಲ್ಲೆಯಲ್ಲಿ ಸಿಟ್ಟಿಂಗ್ಸ್ ನಡೆಸುವುದಾಗಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಫೆಬ್ರವರಿ 16 ರಿಂದ ಮಾನವ ಹಕ್ಕುಗಳ ಆಯೋಗ ದ.ಕ. ಹಾಗೂ ಉಡುಪಿ ಜಿಲ್ಲೆಗೆ ಭೇಟಿ Rating: 5 Reviewed By: karavali Times
Scroll to Top