ಬಂಟ್ವಾಳ, ಫೆಬ್ರವರಿ 20, 2026 (ಕರಾವಳಿ ಟೈಮ್ಸ್) : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಗಾಂಜಾ ಸಹಿತ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ ಘಟನೆ ಕೊಡ್ಮಣ್ ಗ್ರಾಮದ ಪಕ್ಕಳಪಾದೆ ಎಂಬಲ್ಲಿ ಫೆ 19 ರಂದು ನಡೆದಿದೆ.
ಬಂಧಿತ ಆರೋಪಿಯನ್ನು ಮೇರಮಜಲು ನಿವಾಸಿ ಪ್ರಶಾಂತ್ ಅಲಿಯಾಸ್ ಪ್ರಸಾದ್ (30) ಎಂದು ಹೆಸರಿಸಲಾಗಿದೆ. ಪಲ್ಲಮಜಲು ನಿವಾಸಿ ಅಬ್ದುಲ್ ರಜಾಕ್ ಎಂಬಾತ ಮಾರಾಟ ಮಾಡುವಂತೆ ಕೊಟ್ಟಿದ್ದಾನೆ ಎಂದು ಆರೋಪಿ ಹೇಳಿಕೊಂಡಿದ್ದಾನೆ.
ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಸೈ ಮಂಜುನಾಥ ಟಿ ನೇತತ್ವದ ಪೊಲೀಸರು ಈ ದಾಳಿ ಸಂಘಟಿಸಿದ್ದಾರೆ. ಬಂಧಿತ ಆರೋಪಿಯಿಂದ 9 ಸಾವಿರ ರೂಪಾಯಿ ಮೌಲ್ಯದ 180 ಗ್ರಾಂ ಗಾಂಜಾ, 20 ಸಾವಿರ ರೂಪಾಯಿ ಮೌಲ್ಯದ ಕೃತ್ಯಕ್ಕೆ ಬಳಸಿದ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















0 comments:
Post a Comment