ಉಪ್ಪಿನಂಗಡಿ, ಫೆಬ್ರವರಿ 11, 2026 (ಕರಾವಳಿ ಟೈಮ್ಸ್) : ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಉಪ್ಪಿನಂಗಡಿ ಗ್ರಾಮದ ಪಂಜಳ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬಂಧಿತ ಆರೋಪಿಯನ್ನು ಯಹ್ಯಾ ಕೊಕ್ಕಡ (48) ಎಂದು ಹೆಸರಿಸಲಾಗಿದೆ. ಮಂಗಳವಾರ ಸಂಜೆ 6 ಗಂಟೆಗೆ ಉಪ್ಪಿನಂಗಡಿ ಗ್ರಾಮದ ಪಂಜಳಲ್ಲಿ ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ಆರೋಪಿಯನ್ನು ಪೆÇಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಮಾರಾಟ ಉದ್ದೇಶದಿಂದ ಎಂ.ಡಿ.ಎಂ.ಎ. ಹೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.
ಆತನಿಂದ ಸುಮಾರು 3 ಸಾವಿರ ರೂಪಾಯಿ ಮೌಲ್ಯದ ಒಟ್ಟು 2.16 ಗ್ರಾಂ ಎಂಡಿಎಂಎ ಮಾದಕ ವಸ್ತು, 45 ಸಾವಿರ ರೂಪಾಯಿ ಮೌಲ್ಯದ ಒಂದು ಐಫೆÇೀನ್, 1 ಸಾವಿರ ರೂಪಾಯಿ ಮೌಲ್ಯದ ಒಂದು ಸ್ಯಾಮ್ಸಂಗ್ ಕೀಪ್ಯಾಡ್ ಮೊಬೈಲ್ ಸಹಿತ ಒಟ್ಟು 49 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













0 comments:
Post a Comment