ಮಂಗಳೂರು, ಫೆಬ್ರವರಿ 07, 2026 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆಬ್ರವರಿ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಫೆಬ್ರವರಿ 10 ರಂದು ಬೆಳಿಗ್ಗೆ 7.55ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, ಬೆಳಿಗ್ಗೆ 9.30ಕ್ಕೆ ಮಂಗಳೂರು ನಗರಕ್ಕೆ ನೀರು ಪೂರೈಸುವ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೇತ್ರಾವತಿ ನದಿಗೆ ಗಂಗಾ ಪೂಜೆ ನಡೆಸುವರು. 10.45ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 4.30ಕ್ಕೆ ಮಾಣಿ ಜಂಕ್ಷನ್ನಿನಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಚಾವೋ ಸಂಗ್ರಾಮ್ ಪಾದಯಾತ್ರೆಯ ಆ ದಿನದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡುವರು. ಫೆಬ್ರವರಿ 11 ರಂದು ಬೆಳಿಗ್ಗೆ 6.15ಕ್ಕೆ ಸಚಿವರು ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.














0 comments:
Post a Comment