ಮಂಗಳೂರು, ಫೆಬ್ರವರಿ 05, 2026 (ಕರಾವಳಿ ಟೈಮ್ಸ್) : ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಫೆಬ್ರವರಿ 6 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆಬ್ರವರಿ 6 ರಂದು ಬೆಳಿಗ್ಗೆ 7.55ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, 10.30ಕ್ಕೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ಪದವಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.10ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ, 5.30ಕ್ಕೆ ನಗರದ ಫಾದರ್ ಮುಲ್ಲರ್ ಕಾನ್ವೆನ್ಷನ್ ಸೆಂಟರಿನಲ್ಲಿ ನಡೆಯುವ ಇಂಡಿಯನ್ ಡೆಂಟಲ್ ಕಾನ್ಫರೆನ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಫೆಬ್ರವರಿ 7 ರಂದು ಬೆಳಿಗ್ಗೆ 6.5ಕ್ಕೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.


















0 comments:
Post a Comment