ಉಪ್ಪಿನಂಗಡಿ, ಫೆಬ್ರವರಿ 19, 2026 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವನೆ ಮಾಡಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಪುತ್ತೂರು ತಾಲೂಕು, ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ಫೆ 17 ರಂದು ನಡೆದಿದೆ.
ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ವಿಟ್ಲಪಡ್ನೂರು ಗ್ರಾಮದ ನಿವಾಸಿ ಮಹಮ್ಮದ್ ಮೋಹಾದ್ ಎಸ್ (33) ಎಂದು ಹೆಸರಿಸಲಾಗಿದೆ.
ಫೆ 17 ರಂದು ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ಆರೋಪಿ ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿರುವುದಾಗಿ ಸಾರ್ವಜನಿಕರಿಂದ ಬಂದ ಮಾಹಿತಿಯಂತೆ ರೌಂಡ್ಸ್ ಕರ್ತವ್ಯದಲ್ಲಿದ್ದ ಉಪ್ಪಿನಂಗಡಿ ಪೆÇಲೀಸ್ ಠಾಣಾ ಪಿಎಸ್ಸೈ ಸುರೇಶ್ ಸಿ ಟಿ ನೇತೃತ್ವದ ಪೊಲೀಸರು ಸ್ಥಳಕ್ಕೆ ತೆರಳಿ ವಶಕ್ಕೆ ಪಡೆದಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿ ತನ್ನ ಮನೆಗೆ ಹೋಗುವ ದಾರಿಯಲ್ಲಿ ಸಿಗರೇಟ್ ಸೇದಿರುವುದೆಂದು ತಿಳಿದು ಬಂದಿರುತ್ತದೆ. ಬಳಿ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












0 comments:
Post a Comment