ಉಪ್ಪಿನಂಗಡಿ : ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದಾತ ಪೊಲೀಸರ ವಶಕ್ಕೆ - Karavali Times ಉಪ್ಪಿನಂಗಡಿ : ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದಾತ ಪೊಲೀಸರ ವಶಕ್ಕೆ - Karavali Times

728x90

25 February 2026

ಉಪ್ಪಿನಂಗಡಿ : ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದಾತ ಪೊಲೀಸರ ವಶಕ್ಕೆ

ಉಪ್ಪಿನಂಗಡಿ, ಫೆಬ್ರವರಿ 25, 2026 (ಕರಾವಳಿ ಟೈಮ್ಸ್) : ಮಾದಕ ವಸ್ತು ನಶೆಯಲ್ಲಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀರು ಬಂಧಿಸಿದ ಘಟನೆ ಉಪ್ಪಿನಂಗಡಿ ಹಳೆ ಸೇತುವೆ ಬಳಿ ಫೆ 24 ರಂದು ನಡೆದಿದೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು, ಇಳಂತಿಲ ಗ್ರಾಮದ ನಿವಾಸಿ ಮಹಮ್ಮದ್ ಝಿಯಾದ್ (23) ಎಂದು ಹೆಸರಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಸೈ ಸುರೇಶ್ ನೇತೃತ್ವದ ಪೊಲೀಸರು  ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆತ ಮಾದಕ ವಸ್ತು ಸೇವನೆ ಮಾಡಿರುವುದನ್ನು ಪೊಲೀಸ್ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲೂ ದೃಢಪಟ್ಟಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಉಪ್ಪಿನಂಗಡಿ : ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದಾತ ಪೊಲೀಸರ ವಶಕ್ಕೆ Rating: 5 Reviewed By: karavali Times
Scroll to Top