ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಆಯುಕ್ತರ ಸ್ಪಷ್ಟೀಕರಣ - Karavali Times ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಆಯುಕ್ತರ ಸ್ಪಷ್ಟೀಕರಣ - Karavali Times

728x90

6 February 2026

ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಆಯುಕ್ತರ ಸ್ಪಷ್ಟೀಕರಣ

ಮಂಗಳೂರು, ಫೆಬ್ರವರಿ 06, 2026 (ಕರಾವಳಿ ಟೈಮ್ಸ್) : ಪಿಲಿಕುಳ ಜೈವಿಕ ಉದ್ಯಾನವನದ ನಿರ್ವಹಣೆಯ ಬಗ್ಗೆ ಸ್ವೀಕೃತವಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಉಚ್ಚ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದ್ದು, ಇದುವರೆಗೆ ಯಾವುದೇ ತೀರ್ಪು/ ನಿರ್ದೇಶನ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಂದಿರುವುದಿಲ್ಲ. 

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು ಪಿಲಿಕುಳ ಜೈವಿಕ ಉದ್ಯಾನವನವು ಎಂದಿನಂತೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಆಯುಕ್ತರ ಸ್ಪಷ್ಟೀಕರಣ Rating: 5 Reviewed By: karavali Times
Scroll to Top