ಬಂಟ್ವಾಳ, ಫೆಬ್ರವರಿ 20, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ (ಗ್ರಾಮಾಂತರ) ವತಿಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎ.ಬಿ. ಅಬ್ದುಲ್ಲಾ ಅವರು ನೇಮಕಗೊಂಡಿದ್ದಾರೆ.
ಮಾಜಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ನಿರ್ದೇಶನದಂತೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ (ಗ್ರಾಮಾಂತರ) ಪ್ರಚಾರ ಸಮಿತಿ ಅಧ್ಯಕ್ಷ ಎಚ್ ಮಹಮ್ಮದ್ ಆಲಿ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಎ ಬಿ ಅಬ್ದುಲ್ಲಾ ಅವರು ಪ್ರಸ್ತುತ ಬಂಟ್ವಾಳ ತಾಲೂಕು ಕೆಡಿಪಿ ಸದಸ್ಯರಾಗಿ ಹಾಗೂ ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಮಾಜಿ ನಿರ್ದೇಶಕರಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡಿನ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದವರು.















0 comments:
Post a Comment