ಮಂಗಳೂರು, ಫೆಬ್ರವರಿ 17, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ಹಾಗೂ ಮಂಗಳೂರು ನಗರ ಪೆÇಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗಾಗಿ ನೂತನವಾಗಿ ನಿರ್ಮಿಸಲಾದ 12 ಪೆÇಲೀಸ್ ವಸತಿ ಗೃಹಗಳ ಉದ್ಘಾಟನೆ ಹಾಗೂ 54 ವಸತಿಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ರಾಜ್ಯದ ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಫೆ 17 ರಂದು ಮಂಗಳವಾರ ನೆರವೇರಿಸಿದರು.
ಈ ವೇಳೆ ಪೆÇಲೀಸ್ ಸಿಬ್ಬಂದಿಗಳು ವಾಸವಿದ್ದ ವಸತಿಗೃಹಗಳಿಗೆ ಭೇಟಿ ನೀಡಿದ ಸಚಿವರು, ಮೂಲಭೂತ ಸೌಕರ್ಯಗಳು ಸೇರಿದಂತೆ ಸಿಬ್ಬಂದಿಗಳ ಸಮಸ್ಯೆಯನ್ನು ಆಲಿಸಿದರು. ಬಳಿಕ ಮಂಗಳೂರು ನಗರ ಪೆÇಲೀಸ್ ಆಯುಕ್ತರ ಕಚೇರಿಯಲ್ಲಿ ಪೆÇಲೀಸ್ ಪ್ರಗತಿ ಪರಿಶೀಲನೆ ನಡೆಸಿ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಸೇರಿದಂತೆ ವಿವಿಧ ಪ್ರಮುಖ ವಿಚಾರಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಈ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ನಗರ ಪೆÇಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಎಸ್ಪಿ ಡಾ ಅರುಣ್ ಕೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಮುಖಂಡರುಗಳು ಉಪಸ್ಥಿತದ್ದರು.
















0 comments:
Post a Comment