ಮಂಗಳೂರು, ಫೆಬ್ರವರಿ 03, 2026 (ಕರಾವಳಿ ಟೈಮ್ಸ್) : ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ, ಪೆÇಲೀಸ್ ಇಲಾಖೆ, ಹಾಗೂ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇವುಗಳ ಸಂಯುಕ್ತಾಶ್ರಯದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಫೆಬ್ರವರಿ 3 ರಂದು ನಡೆಯಿತು.
ನಗರದ ಪುರಭವನದಿಂದ ಸ್ಟೇಟ್‍ಬ್ಯಾಂಕ್ ವರೆಗೆ ನಡೆದ ರಸ್ತೆ ಸುರಕ್ಷತಾ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ ಚಾಲನೆ ನೀಡಿದರು.
ಈ ಸಂದರ್ಭ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರಗೇಂದ್ರ ಬಸವರಾಜ ಶಿರೋಳಕರ, ಸಂಚಾರ ಪೆÇೀಲಿಸ್ ಉಪವಿಭಾಗದ ಸಹಾಯಕ ಆಯುಕ್ತೆ ನಜ್ಮಾ ಫಾರೂಖಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾಯವಾದಿ ಮಾನಸ ಹೆಗ್ಡೆ ಮೊದಲಾದವರು ಭಾಗವಹಿಸಿದ್ದರು.















0 comments:
Post a Comment