ಕೇರಳದಿಂದ ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು : ಲಾರಿ ಸಹಿತ ಚಾಲಕರು ವಶಕ್ಕೆ - Karavali Times ಕೇರಳದಿಂದ ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು : ಲಾರಿ ಸಹಿತ ಚಾಲಕರು ವಶಕ್ಕೆ - Karavali Times

728x90

25 February 2026

ಕೇರಳದಿಂದ ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು : ಲಾರಿ ಸಹಿತ ಚಾಲಕರು ವಶಕ್ಕೆ

ಬಂಟ್ವಾಳ, ಫೆಬ್ರವರಿ 25, 2026 (ಕರಾವಳಿ ಟೈಮ್ಸ್) : ಕೇರಳದಿಂದ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು ಎರಡು ಲಾರಿಗಳ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. 

ಬಂಧಿತ ಆರೋಪಿ ಲಾರಿ ಚಾಲಕರನ್ನು ವಿಟ್ಲ ನಿವಾಸಿಗಳಾದ ಸಾದಿಕ್ (25) ಹಾಗೂ ಮೊಹಮ್ಮದ್ (46) ಎಂದು ಹೆಸರಿಸಲಾಗಿದೆ. ವಿಟ್ಲ ಪಿಎಸ್ಸೈ ರಾಮಕೃಷ್ಣ ಅವರ ನೇತೃತ್ವದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. 

ಫೆ 25 ರಂದು ಕೇರಳ ಕಡೆಯಿಂದ ಪೆರುವಾಯಿ ಮಾರ್ಗವಾಗಿ ಲಾರಿಗಳಲ್ಲಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ, ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ ಈ ಕಾರ್ಯಾಚರಣೆ ನಡೆಸಿ ಕೆಎ21 ಸಿ0562 ಹಾಗೂ ಕೆಎ12 ಎ2252 ನೋಂದಣಿ ಸಂಖ್ಯೆಯ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಸದ್ರಿ ಕೆಂಪು ಕಲ್ಲುಗಳನ್ನು ಕೇರಳದ ಧರ್ಮತ್ತಡ್ಕದಿಂದ ವೇಣು ಎಂಬವರು ತುಂಬಿಸಿ ಕಳುಹಿಸಿಕೊಟ್ಟಿರುವುದಾಗಿ ಹಾಗೂ ಈ ಬಗ್ಗೆ ಯಾವುದೇ ಪರವಾನಿಗೆ ಅಥವಾ ದಾಖಲಾತಿಗಳು ಇರುವುದಿಲ್ಲ ಎಂಬುದಾಗಿ ಪೊಲೀಸ್ ಪರಿಶೀಲನೆಯ ವೇಳೆ ತಿಳಿದುಬಂದಿದೆ. ಮುಂದಿನ ಕಾನೂನು ಕ್ರಮಕ್ಕಾಗಿ ಲಾರಿಗಳ ಚಾಲಕರನ್ನು ವಶಕ್ಕೆ ಪಡೆದು, ಲೋಡ್ ಸಹಿತವಾಗಿ ಲಾರಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕೇರಳದಿಂದ ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು : ಲಾರಿ ಸಹಿತ ಚಾಲಕರು ವಶಕ್ಕೆ Rating: 5 Reviewed By: karavali Times
Scroll to Top