ಗ್ರಾಹಕರಿಗೆ ಆಧುನಿಕ ಸೌಲಭ್ಯ ಒದಗಿಸಿದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ : ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಉದ್ಘಾಟನೆ - Karavali Times ಗ್ರಾಹಕರಿಗೆ ಆಧುನಿಕ ಸೌಲಭ್ಯ ಒದಗಿಸಿದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ : ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಉದ್ಘಾಟನೆ - Karavali Times

728x90

20 February 2026

ಗ್ರಾಹಕರಿಗೆ ಆಧುನಿಕ ಸೌಲಭ್ಯ ಒದಗಿಸಿದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ : ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಉದ್ಘಾಟನೆ

ಮಂಗಳೂರು, ಫೆಬ್ರವರಿ 21, 2026 (ಕರಾವಳಿ ಟೈಮ್ಸ್) : ಇತರ ಬ್ಯಾಂಕುಗಳಿಗಿಂತ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಹಿಂದುಳಿಯಬಾರದು ಎಂಬ ಉದ್ದೇಶದಿಂದ ನಮ್ಮ ಬ್ಯಾಂಕಿನಲ್ಲೂ ಯುಪಿಐ ಹಾಗೂ ಐಎಂಪಿಎಸ್ ಡಿಜಿಟಲ್ ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ ಎಂದು ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ಹೇಳಿದರು. 

ಬ್ಯಾಂಕಿನ ಗ್ರಾಹಕರಿಗೆ ಡಿಜಿಟಲ್ ಸೌಲಭ್ಯಗಳಾದ ಯುಪಿಐ ಹಾಗೂ ಐಎಂಪಿಎಸ್ ಸೌಲಭ್ಯವನ್ನು ಫೆ 17 ರಂದು ಬ್ಯಾಂಕ್ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶೇಷ ಛಾಪನ್ನು ಮೂಡಿಸಿರುವ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ತನ್ನ ಗ್ರಾಹಕರಿಗೆ ಆಧುನಿಕ ತಂತ್ರಜ್ಞಾನಗಳನ್ನೊಳಗೊಂಡ ಡಿಜಿಟಲ್ ಸೌಲಭ್ಯಗಳನ್ನೂ ಒದಗಿಸಲಿದೆ ಎಂದರು. 

ನಂದಕುಮಾರ್ ಅವರು ಬ್ಯಾಂಕಿನ ಆಧುನಿಕ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಪ್ರಮುಖರಾದ ಭಾಸ್ಕರ್ ಕೋಟ್ಯಾನ್, ರಮೇಶ್, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಾಜೀವ್ ಕಕ್ಕೆಪದವು ಕಾರ್ಯಕ್ರಮ ನಿರೂಪಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಗ್ರಾಹಕರಿಗೆ ಆಧುನಿಕ ಸೌಲಭ್ಯ ಒದಗಿಸಿದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ : ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಉದ್ಘಾಟನೆ Rating: 5 Reviewed By: karavali Times
Scroll to Top