ಎಸ್ ಐ ಆರ್ ಬಗ್ಗೆ ಬಂಟ್ವಾಳದಲ್ಲಿ ಕಾಂಗ್ರೆಸ್ ವತಿಯಿಂದ ವಿಚಾರ ಸಂಕಿರಣ
ಬಂಟ್ವಾಳ, ಫೆಬ್ರವರಿ 17, 2026 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಬಗ್ಗೆ ವಿಚಾರ ಸಂಕಿರಣ ಕಾರ್ಯಕ್ರಮ ಬಿ ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಫೆ 17 ರಂದು ಮಂಗಳವಾರ ನಡೆಯಿತು.
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಬೂತ್ ಮಟ್ಟದ ಏಜೆಂಟ್ (ಬಿ ಎಲ್ ಎ) ಮತ್ತು ವಲಯ ಕಾಂಗ್ರೆಸ್ ಅಧ್ಯಕ್ಷರಿಗಾಗಿ ಹಮ್ಮಿಕೊಳ್ಳಲಾದ ಈ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಸಚಿವ ಬಿ ರಮಾನಾಥ ರೈ ಮಾತನಾಡಿ, ಕಾರ್ಯಕ್ರಮಕ್ಕೆ ಬಂದಿರುವ ಎಲ್ಲಾ ಏಜೆಂಟರುಗಳು ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಮುಂದಿನ ದಿನಗಳಲ್ಲಿ ತಮ್ಮ ತಮ್ಮ ಬೂತ್ ಗಳಲ್ಲಿ ಕಾರ್ಯಗತಗೊಳಿಸಬೇಕು ಎಂದು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಾಗೃತ ಕರ್ನಾಟಕದ ಡಾ ವಾಸು ಎಚ್ ವಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಜಾಗೃತ ಕರ್ನಾಟಕದ ಸದಸ್ಯರಾದ ರಜನೀಕಾಂತ್, ಸಂತೋಷ್, ಮೋಹನ್ ಜಿ ಕೆ, ಸಹಕರಿಸಿದರು.
ಕಾಂಗ್ರೆಸ್ ಪ್ರಚಾರ ಸಮಿತಿ ಉಸ್ತುವಾರಿ ದುರ್ಗಾ ಪ್ರಸಾದ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅದ್ಯಕ್ಷ ಡೆನ್ನಿಸ್ ಡಿ ಸಿಲ್ವ, ಜಿಲ್ಲಾ ಲೀಗಲ್ ಸೆಲ್ ಅದ್ಯಕ್ಷ ಮನೋರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಚಂದ್ರಶೇಖರ್ ಭಂಡಾರಿ, ಬಾಲಕೃಷ್ಣ ಅಂಚನ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಐಡಾ ಸುರೇಶ್, ನಿವೃತ್ತ ಎ ಸಿ ಎಫ್ ಮುಹಮ್ಮದ್, ಪ್ರಮುಖರಾದ ಬಿ ಎಂ ಅಬ್ಬಾಸ್ ಅಲಿ, ಕೆ ಪದ್ಮನಾಭ ರೈ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಶೈಲಜಾ ರಾಜೇಶ್, ಜಯಂತಿ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.


















0 comments:
Post a Comment