ಬಂಟ್ವಾಳ, ಫೆಬ್ರವರಿ 09, 2026 (ಕರಾವಳಿ ಟೈಮ್ಸ್) : ಸ್ಕೂಟರ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಹಾಗೂ ಸ್ಕೂಟರ್ ಸವಾರರು ಗಾಯಗೊಂಡ ಘಟನೆ ಸೂರಿಕುಮೇರು ಎಂಬಲ್ಲಿ ಫೆ 7 ರಂದು ರಾತ್ರಿ ವೇಳೆ ಸಂಭವಿಸಿದೆ.
ಗಾಯಾಳುಗಳನ್ನು ಪಾದಚಾರಿ ವ್ಯಕ್ತಿ ನಾಗಪ್ಪ ಕುಲಾಲ್, ಸ್ಕೂಟರ್ ಸವಾರ ಚಿಂತನ್ ಹಾಗೂ ಸಹಸವಾರ ಉಮೇಶ್ ಎಂದು ಹೆಸರಿಸಲಾಗಿದೆ. ನಾಗಪ್ಪ ಅವರು ತನ್ನ ಮನೆ ಬಳಿ ಹೆದ್ದಾರಿ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಬಂದ ಸ್ಕೂಟರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ನಾಗಪ್ಪ ಕುಲಾಲ್ ಸಹಿತ ಸ್ಕೂಟರ್ ಸವಾರರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













0 comments:
Post a Comment